ತಿರುವನಂತಪುರಂ: ಪ್ರವಾಸಿ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಅಂತಿಮ ಪಂದ್ಯಕ್ಕೆ ಗ್ರೀನ್ ಫೀಲ್ಡ್ ಕ್ರೀಡಾಂಗಣ ಸಜ್ಜಾಗಿದೆ. ತಿರುವನಂತಪುರಂನಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ.
ಈಗಾಗಲೇ ಸರಣಿ ಗೆದ್ದಿರುವ ಕಾರಣ ಭಾರತ ತಂಡದಲ್ಲಿಂದು ಎರಡು ಬದಲಾವಣೆ ಮಾಡಲಾಗಿದೆ. ಹಾರ್ದಿಕ್ ಪಾಂಡ್ಯ ಮತ್ತು ಉಮ್ರಾನ್ ಮಲಿಕ್ ಗೆ ವಿಶ್ರಾಂತಿ ನೀಡಲಾಗಿದ್ದು, ಅವರ ಬದಲಿಗೆ ಸೂರ್ಯಕುಮಾರ್ ಯಾದವ್ ಮತ್ತು ವಾಷಿಂಗ್ಟನ್ ಸುಂದರ್ ಅವಕಾಶ ಪಡೆದಿದ್ದಾರೆ.
ಶ್ರೀಲಂಕಾ ತಂಡವೂ ಎರಡು ಬದಲಾವಣೆ ಮಾಡಿಕೊಂಡಿದೆ. ಧನಂಜಯ ಡಿಸಿಲ್ವ ಮತ್ತು ದುನಿತ್ ವೆಲ್ಲಲಗೆ ಬದಲಿಗೆ ಅಶೇನ್ ಭಂಡಾರ ಮತ್ತು ಜೆಫ್ರಿ ವೆಂಡರ್ಸೆ ಆಡುವ ಬಳಗದಲ್ಲಿ ಅವಕಾಶ ಪಡೆದಿದ್ದಾರೆ.
ಶ್ರೀಲಂಕಾ: ಅವಿಷ್ಕಾ ಫೆರ್ನಾಂಡೊ, ನುವಾನಿಡು ಫೆರ್ನಾಂಡೊ, ಕುಸಲ್ ಮೆಂಡಿಸ್ (ವಿ.ಕೀ), ಅಶೆನ್ ಬಂಡಾರ, ಚರಿತ್ ಅಸಲಂಕಾ, ದಸುನ್ ಶನಕ (ನಾ), ವಾನಿಂದು ಹಸರಂಗ, ಜೆಫ್ರಿ ವಾಂಡರ್ಸೆ, ಚಾಮಿಕಾ ಕರುಣಾರತ್ನೆ, ಕಸುನ್ ರಜಿತ, ಲಹಿರು ಕುಮಾರ
Related Articles
ಭಾರತ: ರೋಹಿತ್ ಶರ್ಮಾ (ನಾ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿ.ಕೀ), ಸೂರ್ಯಕುಮಾರ್ ಯಾದವ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.