Advertisement

“ಮತ್ತೆ ಕಡೆಗಣನೆ..” ಭಾರತೀಯ ತಂಡ ಸೇರಲು ಈತ ಇನ್ನೆಷ್ಟು ಉತ್ತಮ ಪ್ರದರ್ಶನ ತೋರಬೇಕು?

12:27 PM Oct 27, 2020 | keerthan |

ಮುಂಬೈ: 13ನೇ ಆವೃತ್ತಿಯ ಐಪಿಎಲ್ ಕೊನೆಯ ಹಂತ ತಲುಪುತ್ತಿದೆ. ಕೆಲವು ನಿರೀಕ್ಷೆ ಮೂಡಿಸಿದ್ದ ಆಟಗಾರರು ವಿಫಲರಾದರೆ, ಕೆಲವು ಯುವ ಪ್ರತಿಭೆಗಳು ಮಿಂಚುತ್ತಿದ್ದಾರೆ. ಇದರ ನಡುವೆ ಮುಂದಿನ ಆಸ್ಟ್ರೇಲಿಯಾ ಸರಣಿಗೆ ಟೀಂ ಇಂಡಿಯಾದ ಆಯ್ಕೆ ಮಾಡಲಾಗಿದೆ. ಕನ್ನಡಿಗ ಕೆ ಎಲ್ ರಾಹುಲ್ ಅವರನ್ನು ನಿಗದಿತ ಮಾದರಿ ತಂಡಕ್ಕೆ ಉಪನಾಯಕನ್ನಾಗಿ ಆಯ್ಕೆ ಮಾಡಲಾಗಿದೆ.

Advertisement

ಈ ನಡುವೆ ಓರ್ವ ಭಾರತೀಯ ಪ್ರತಿಭೆಯ ಬಗ್ಗೆ ಚರ್ಚೆ ನಡೆಯುತ್ತಿದೆ. ಪ್ರಥಮ ದರ್ಜೆ ಕ್ರಿಕೆಟ್, ಐಪಿಎಲ್ ನಲ್ಲಿ ಎಷ್ಟೇ ಉತ್ತಮ ಪ್ರದರ್ಶನ ನೀಡಿದರೂ ಭಾರತೀಯ ತಂಡಕ್ಕೆ ಆಯ್ಕೆಯಾಗುತ್ತಿಲ್ಲ. ರಾಷ್ಟ್ರೀಯ ತಂಡದ ಆಯ್ಕೆಗಾರರು ಪದೇ ಪದೇ ಕಡೆಗಣಿಸುತ್ತಿದ್ದಾರೆ. ಆ ಆಟಗಾರನೇ ಸದ್ಯ ಮುಂಬೈ ಇಂಡಿಯನ್ಸ್ ಪರ ಆಡುತ್ತಿರುವ ಸೂರ್ಯಕುಮಾರ್ ಯಾದವ್.

30 ವರ್ಷದ ಮುಂಬೈ ಮೂಲದ ಆಟಗಾರ ಸೂರ್ಯಕುಮಾರ್ ಯಾದವ್ ಕಳೆದ ಕೆಲವು ವರ್ಷಗಳಿಂದ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದಾರೆ. ಕಳೆದ ಕೆಲವು ಐಪಿಎಲ್ ನಲ್ಲೂ ಮಿಂಚು ಹರಿಸಿದ್ದಾರೆ. ಯಾವುದೇ ಕ್ರಮಾಂಕದಲ್ಲೂ ಆಡುವ ಸೂರ್ಯಕುಮಾರ್ ರತ್ತ ಮಾತ್ರ ರಾಷ್ಟ್ರೀಯ ತಂಡದ ಆಯ್ಕೆಗಾರರು ಬೆಳಕು ಹರಿಸುತ್ತಿಲ್ಲ.

ಸೂರ್ಯಕುಮಾರ್ ಕಡೆಗಣನೆ ಬಗ್ಗೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕ್ರಿಕೆಟಿಗರಾದ ಹರ್ಭಜನ್ ಸಿಂಗ್ ಮತ್ತು ಮನೋಜ್ ತಿವಾರಿ ಕೂಡಾ ಬೇಸರ ವ್ಯಕ್ತಪಡಿಸಿದ್ದಾರೆ.

Advertisement

ಇದನ್ನೂ ಓದಿ:ಆಸ್ಟ್ರೇಲಿಯ ಪ್ರವಾಸ : ರೋಹಿತ್‌ ಗೈರು, ರಾಹುಲ್‌ ಉಪನಾಯಕ

ಭಾರತ ಟಿ20 ತಂಡ: ವಿರಾಟ್‌ ಕೊಹ್ಲಿ (ನಾಯಕ), ಶಿಖರ್‌ ಧವನ್‌, ಮಾಯಾಂಕ್‌ ಅಗರ್ವಾಲ್‌, ಕೆ.ಎಲ್‌. ರಾಹುಲ್‌ (ಉಪನಾಯಕ), ಶ್ರೇಯಸ್‌ ಅಯ್ಯರ್‌, ಮನೀಷ್‌ ಪಾಂಡೆ, ಹಾರ್ದಿಕ್‌ ಪಾಂಡ್ಯ, ಸಂಜು ಸ್ಯಾಮ್ಸನ್‌, ರವೀಂದ್ರ ಜಡೇಜ, ವಾಷಿಂಗ್ಟನ್‌ ಸುಂದರ್‌, ಯಜುವೇಂದ್ರ ಚಹಲ್‌, ಜಸ್‌ಪ್ರೀತ್‌ ಬುಮ್ರಾ, ಮೊಹಮ್ಮದ್‌ ಶಮಿ, ನವದೀಪ್‌ ಸೈನಿ, ದೀಪಕ್‌ ಚಹರ್‌, ವರುಣ್‌ ಚಕ್ರವರ್ತಿ.

ಏಕದಿನ ತಂಡ: ವಿರಾಟ್‌ ಕೊಹ್ಲಿ (ನಾಯಕ), ಶಿಖರ್‌ ಧವನ್‌, ಶುಭಮನ್‌ ಗಿಲ್‌, ಕೆ.ಎಲ್‌. ರಾಹುಲ್‌ (ಉಪನಾಯಕ), ಶ್ರೇಯಸ್‌ ಅಯ್ಯರ್‌, ಮನೀಷ್‌ ಪಾಂಡೆ, ಹಾರ್ದಿಕ್‌ ಪಾಂಡ್ಯ, ಮಾಯಾಂಕ್‌ ಅಗರ್ವಾಲ್‌, ರವೀಂದ್ರ ಜಡೇಜ, ಯಜುವೇಂದ್ರ ಚಹಲ್‌, ಕುಲದೀಪ್‌ ಯಾದವ್‌, ಜಸ್‌ಪ್ರೀತ್‌ ಬುಮ್ರಾ, ಮೊಹಮ್ಮದ್‌ ಶಮಿ, ನವದೀಪ್‌ ಸೈನಿ, ಶಾರ್ದೂಲ್ ಠಾಕೂರ್‌.

ಟೆಸ್ಟ್‌ ತಂಡ: ವಿರಾಟ್‌ ಕೊಹ್ಲಿ (ನಾಯಕ), ಮಾಯಾಂಕ್‌ ಅಗರ್ವಾಲ್‌, ಪೃಥ್ವಿ ಶಾ, ಕೆ.ಎಲ್‌. ರಾಹುಲ್‌, ಚೇತೇಶ್ವರ್‌ ಪೂಜಾರ, ಅಜಿಂಕ್ಯ ರಹಾನೆ (ಉಪನಾಯಕ), ಹನುಮ ವಿಹಾರಿ, ಶುಭಮನ್‌ ಗಿಲ್‌, ವೃದ್ಧಿಮಾನ್‌ ಸಾಹಾ, ರಿಷಭ್‌ ಪಂತ್‌, ಜಸ್‌ಪ್ರೀತ್‌ ಬುಮ್ರಾ, ಮೊಹಮ್ಮದ್‌ ಶಮಿ, ಉಮೇಶ್‌ ಯಾದವ್‌, ನವದೀಪ್‌ ಸೈನಿ, ಕುಲದೀಪ್‌ ಯಾದವ್‌, ರವೀಂದ್ರ ಜಡೇಜ, ಆರ್‌. ಅಶ್ವಿ‌ನ್‌, ಮೊಹಮ್ಮದ್‌ ಸಿರಾಜ್‌.

Advertisement

Udayavani is now on Telegram. Click here to join our channel and stay updated with the latest news.

Next