Advertisement

ಟಿ 20 ಶ್ರೇಯಾಂಕ: ಬಾಬರ್ ಅಜಮ್ ಹಿಂದಿಕ್ಕಿದ ಸೂರ್ಯಕುಮಾರ್

06:13 PM Sep 21, 2022 | Team Udayavani |

ದುಬೈ: ಬುಧವಾರ ಬಿಡುಗಡೆ ಮಾಡಲಾದ ಇತ್ತೀಚಿನ ಐಸಿಸಿ ಪುರುಷರ ಟಿ 20 ಬ್ಯಾಟ್ಸ್ ಮ್ಯಾನ್ ಗಳ ಪಟ್ಟಿಯಲ್ಲಿ ಆಟಗಾರರ ಶ್ರೇಯಾಂಕದಲ್ಲಿ ಭಾರತದ ಸೂರ್ಯಕುಮಾರ್ ಯಾದವ್ ಅವರು ಪಾಕಿಸ್ಥಾನ ತಂಡದ ನಾಯಕ ಬಾಬರ್ ಅಜಮ್ ಅವರನ್ನು ಹಿಂದಿಕ್ಕಿ ಮೂರನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

Advertisement

ಮಂಗಳವಾರ ಮೊಹಾಲಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧ ದ ಮೂರು ಪಂದ್ಯಗಳ ಸರಣಿಯ ಆರಂಭಿಕ ಪಂದ್ಯದಲ್ಲಿ ಯಾದವ್ 46 ರನ್ ಗಳಿಸಿ ಬೃಹತ್ ಮೊತ್ತ ಗಳಿಸುವಲ್ಲಿ ಕೊಡುಗೆ ನೀಡಿದ್ದರು.  ಟಿ 20 ಬ್ಯಾಟ್ಸ್ ಮ್ಯಾನ್ ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಪಾಕಿಸ್ಥಾನದ ಆರಂಭಿಕ ಆಟಗಾರ ಮೊಹಮ್ಮದ್ ರಿಜ್ವಾನ್ ಅವರಿದ್ದು, ದಕ್ಷಿಣ ಆಫ್ರಿಕಾದ ಐಡೆನ್ ಮಾರ್ಕ್ರಾಮ್ ಎರಡನೇ ಸ್ಥಾನದಲ್ಲಿದ್ದಾರೆ.

ಮೊಹಾಲಿಯಲ್ಲಿ ನಡೆದ ಪಂದ್ಯದಲ್ಲಿ ಭಾರತ 6 ವಿಕೆಟಿಗೆ 208 ರನ್‌ ಪೇರಿಸಿತ್ತು, ಆಸ್ಟ್ರೇಲಿಯ 19.2 ಓವರ್‌ಗಳಲ್ಲಿ 6 ವಿಕೆಟಿಗೆ 211 ರನ್‌ ಹೊಡೆದು ಜಯಭೇರಿ ಬಾರಿಸಿತ್ತು.

ಭಾರತದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಆಸ್ಟ್ರೇಲಿಯಾ ವಿರುದ್ಧ ಅಜೇಯ 71 ರನ್ ಗಳಿಸಿದ ನಂತರ  2 ಸ್ಥಾನಗಳ ಜಿಗಿತದೊಂದಿಗೆ 5 ನೇ ಸ್ಥಾನಕ್ಕೆ ತಲುಪಿದ್ದಾರೆ. ಅಕ್ಷರ್ ಪಟೇಲ್ ಅವರು ಮಂಗಳವಾರ ಮೂರು ವಿಕೆಟ್‌ಗಳನ್ನು ಪಡೆದ ನಂತರ ಬೌಲರ್‌ಗಳ ಪಟ್ಟಿಯಲ್ಲಿ 24 ಸ್ಥಾನಗಳನ್ನು ಮೇಲಕ್ಕೇರಿ 33 ನೇ ಸ್ಥಾನಕ್ಕೆ ತಲುಪಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next