ಮುಂಬೈ: ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇತ್ತೀಚೆಗಷ್ಟೆ, ಸುಶಾಂತ್ ತಂದೆ ಕೆ.ಕೆ.ಸಿಂಗ್ ಅವರು ರಿಯಾ ಚಕ್ರವರ್ತಿ ಮತ್ತು ಅವರ ಕುಟುಂಬದ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಮತ್ತು ಇತರ ವಿಚಾರಗಳಿಗಾಗಿ ಎಫ್ಐಆರ್ ದಾಖಲಿಸಿದ್ದಾರೆ.
ಏತನ್ಮಧ್ಯೆ ಸುಶಾಂತ್ ಸಿಂಗ್ ಅವರ ಅಮೆರಿಕಾ ಮೂಲದ ಸಹೋದರಿ ಶ್ವೇತಾ ಸಿಂಗ್ ಕೀರ್ತಿ, ಸಾಮಾಜಿಕ ಜಾಲತಾಣದಲ್ಲಿ ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದು ಪ್ರಧಾನಿ ಮೋದಿ ಅವರಿಗೆ ಟ್ಯಾಗ್ ಮಾಡಿದ್ದಾರೆ. ಮಾತ್ರವಲ್ಲದೆ ಸಮರ್ಪಕ ತನಿಖೆ ನಡೆಸುವಂತೆ ಕೋರಿಕೊಂಡಿದ್ದಾರೆ.
ನನ್ನ ಹೃದಯವು ನೀವು ಸತ್ಯದ ಪರವಿರುವಿರಾ ಎಂದು ಹೇಳುತ್ತದೆ. ನಾವು ತುಂಬಾ ಸರಳ ಕುಟುಂಬದಿಂದ ಬಂದವರು. ಬಾಲಿವುಡ್‌ನಲ್ಲಿದ್ದಾಗ ನನ್ನ ಸಹೋದರನಿಗೆ ಯಾವುದೇ ಗಾಡ್‌ಫಾದರ್ ಇರಲಿಲ್ಲ ಮತ್ತು ಈಗಲೂ ಯಾರೂ ಇಲ್ಲ. ಈ ಪ್ರಕರಣವನ್ನು ತಕ್ಷಣವೇ ಪರಿಶೀಲಿಸಬೇಕು ಮತ್ತು ಎಲ್ಲವನ್ನೂ ಸಮರ್ಪಕವಾಗಿ ನಿರ್ವಹಿಸಲಾಗುತ್ತಿದೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ಸಾಕ್ಷಿಗಳು ನಾಶವಾಗದಂತೆ ನೋಡಿಕೊಳ್ಳಬೇಕು. ನ್ಯಾಯವು ಮೇಲುಗೈ ಸಾಧಿಸುತ್ತದೆ ಎಂದು ಭಾವಿಸಿದ್ದೇನೆ. ಇಡೀ ಪ್ರಕರಣ ತುರ್ತಾಗಿ ಇತ್ಯರ್ಥಗೊಳ್ಳಬೇಕು ಎಂದು ಪ್ರಧಾನಿ ಮೋದಿಯವರಲ್ಲಿ ಶ್ವೇತಾ ಸಿಂಗ್ ಕೀರ್ತಿ ಮನವಿ ಮಾಡಿದ್ದಾರೆ.