Advertisement

ಸುಷ್ಮಾ ಸ್ವರಾಜ್‌ ಅಂತಿಮ ದರ್ಶನ ಪಡೆದ ಸಿಎಂ

11:39 PM Aug 07, 2019 | Team Udayavani |

ಬೆಂಗಳೂರು: ದೆಹಲಿಯಲ್ಲಿ ಮಂಗಳವಾರ ನಿಧನರಾದ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಅವರ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಬುಧವಾರ ಅಂತಿಮ ನಮನ ಸಲ್ಲಿಸಿದರು. ಪ್ರಧಾನಿ, ಕೇಂದ್ರ ಸಚಿವರ ಭೇಟಿ ಹಾಗೂ ಸಂಪುಟ ರಚನೆ ಸಂಬಂಧ ದೆಹಲಿಯಲ್ಲೇ ಮಂಗಳವಾರ ವಾಸ್ತವ್ಯ ಹೂಡಿದ್ದ ಯಡಿಯೂರಪ್ಪ ಅವರು ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಅವರೊಂದಿಗೆ ಬುಧವಾರ ಸುಷ್ಮಾ ಸ್ವರಾಜ್‌ ಅವರ ಅಂತಿಮ ದರ್ಶನ ಪಡೆದರು.

Advertisement

ಸುಷ್ಮಾ ಸ್ವರಾಜ್‌ ಅವರು ಉತ್ತಮ ವಾಗ್ಮಿ ಹಾಗೂ ಅಸಾಧಾರಣ ನಾಯಕತ್ವ ಗುಣ ಹೊಂದಿದ್ದರು. ವಿದೇಶಾಂಗ ಸಚಿವೆಯಾಗಿ ಅದ್ವಿತೀಯ ಸೇವೆ ಸಲ್ಲಿಸಿದ್ದ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ನಂತರ ಈ ಹುದ್ದೆ ಅಲಂಕರಿಸಿದ ಎರಡನೇ ಮಹಿಳೆಯಾಗಿದ್ದರು. ಸಂಕಷ್ಟದಲ್ಲಿರುವ ಜನರ ನೆರವಿಗೆ ಸ್ವಯಂ ಪ್ರೇರಣೆಯಿಂದ ಧಾವಿಸುತ್ತಿದ್ದ ಅವರು ಸಾಕಷ್ಟು ಜನಪ್ರಿಯತೆ ಗಳಿಸಿದ್ದರು ಎಂದು ಯಡಿಯೂರಪ್ಪ ಸ್ಮರಿಸಿದರು. ಸುಷ್ಮಾ ಸ್ವರಾಜ್‌ ಅವರಿಗೆ ಕರ್ನಾಟಕದೊಂದಿಗೆ ಅವಿನಾಭಾವ ಸಂಬಂಧವಿತ್ತು.

ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ 1999ರಲ್ಲಿ ಸೋನಿಯಾ ಗಾಂಧಿಯವರ ವಿರುದ್ಧ ಸ್ಪರ್ಧಿಸಿದ್ದರು. ಬಳಿಕ ಸುಮಾರು 10 ವರ್ಷಗಳ ಕಾಲ ಪ್ರತಿ ವರಮಹಾಲಕ್ಷ್ಮೀ ಹಬ್ಬಕ್ಕೆ ಬಳ್ಳಾರಿಗೆ ಆಗಮಿಸಿ ಹಬ್ಬದಲ್ಲಿ ಪಾಲ್ಗೊಳ್ಳುತ್ತಿದ್ದರು. ಕನ್ನಡದಲ್ಲೇ ಮಾತನಾಡುತ್ತಾ, ಜನರೊಂದಿಗೆ ಬೆರೆಯುವ ಅವರ ಸ್ವಭಾವ ಅನುಕರಣೀಯ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬದವರಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next