Advertisement

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅನುಮಾನಸ್ಪದ ಬ್ಯಾಗ್ ಪತ್ತೆ : ಎಲ್ಲೆಡೆ ಹೆಚ್ಚಿದ ಭದ್ರತೆ

09:41 AM Jan 21, 2020 | Suhan S |

ಉಡುಪಿ : ಮಂಗಳೂರು ವಿಮಾನ ನಿಲ್ದಾಣದಲ್ಲಿ ಸೋಮವಾರ ಬೆಳ್ಳಗೆ ಅನುಮಾನಸ್ಪದ ಬ್ಯಾಗ್  ಪತ್ತೆಯಾದ ವಸ್ತು ಹಿನ್ನಲೆಯಲ್ಲಿ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

Advertisement

ಪೊಲೀಸ್ ಇಲಾಖೆಯ ಕಣ್ಗಾವಲಿನಲ್ಲಿ  ಅಹಿತಕರ ಘಟನೆ ನಡೆಯದಂತೆ ಮುನ್ನಚ್ಚೆರಿಕೆಯ ಕ್ರಮ ವಹಿಸಿದ್ದು, ಭದ್ರತೆಯ ದೃಷ್ಟಿಯಲ್ಲಿ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣ ಸೇರಿದಂತೆ, ಹುಬ್ಬಳ್ಳಿ ವಿಮಾನ ನಿಲ್ದಾಣದ ಸುತ್ತ ಮುತ್ತ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಹುಬ್ಬಳ್ಳಿಯ ವಿಮಾನ ನಿಲ್ದಾಣದ ಮೊದಲ ಅಂತಸ್ತಿನಲ್ಲಿರುವ ಅಂಗಡಿ- ಮುಂಗಟ್ಟುಗಳನ್ನು ಪೊಲೀಸರು ಬಂದ್ ಮಾಡಲು ಸೂಚಿಸಿದ್ದಾರೆ.

ಇತ್ತ ಉಡುಪಿ ರೈಲ್ವೆ ನಿಲ್ದಾಣದಲ್ಲಿ ಪೊಲೀಸರು ಭದ್ರತೆಯನ್ನು ಹೆಚ್ಚಿಸುವುದರ ಜೊತೆಗೆ ಅನುಮಾನಸ್ಪದ ವ್ಯಕ್ತಿಗಳ ಮೇಲೆ ಕಣ್ಣಿಟ್ಟಿದ್ದು, ವಾಹನಗಳನ್ನು ತಪಾಸಣೆ ನಡೆಸಿ, ಅಕ್ಕಪಕ್ಕದ ಸ್ಥಳಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next