Advertisement

Delhi Police: ದೆಹಲಿ ಪೊಲೀಸರ ಕಾರ್ಯಾಚರಣೆ.. ಶಂಕಿತ ಐಸಿಸ್‌ ಉಗ್ರ ಶಾಹ್‌ನವಾಜ್‌ ಬಂಧನ

10:45 AM Oct 02, 2023 | Team Udayavani |

ನವದೆಹಲಿ: ದೇಶದ ಹಲವೆಡೆ ದಾಳಿ ನಡೆಸುವ ಮೂಲಕ ಶಾಂತಿ ಕದಡುವ ಕೆಲಸ ಮಾಡುತ್ತಿದ್ದ ಶಂಕಿತ ಉಗ್ರರ ಬಂಧನಕ್ಕೆ ಎನ್ ಐಎ ತಂಡ ನಡೆಸಿದ ದಾಳಿಯಲ್ಲಿ ದೆಹಲಿ ಪೊಲೀಸರ ಸಹಕಾರದೊಂದಿಗೆ ಓರ್ವ ಶಂಕಿತ ಉಗ್ರನನ್ನು ಬಂಧಿಸುವಲ್ಲಿ ಅಧಿಕಾರಿಗಳ ತಂಡ ಯಶಸ್ವಿಯಾಗಿದೆ.

Advertisement

ಶಂಕಿತ ಇಸ್ಲಾಮಿಕ್ ಸ್ಟೇಟ್ (ಐಸಿಸ್) ಭಯೋತ್ಪಾದಕ ಮತ್ತು ಇತರ ಇಬ್ಬರು ಭಯೋತ್ಪಾದಕ ಶಂಕಿತರನ್ನು ದೆಹಲಿ ಪೊಲೀಸರ ವಿಶೇಷ ತಂಡ ಸೋಮವಾರ ಬಂಧಿಸಿದೆ.

ಐಸಿಸ್ ಭಯೋತ್ಪಾದಕ ಮೊಹಮ್ಮದ್ ಶಹನವಾಜ್ ಅಲಿಯಾಸ್ ಶಫಿ ಉಜ್ಜಮಾ ಎನ್‌ಐಎಯ ಮೋಸ್ಟ್ ವಾಂಟೆಡ್ ಲಿಸ್ಟ್‌ನಲ್ಲಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ ಆತನ ತಲೆಗೆ 3 ಲಕ್ಷ ರೂ. ಘೋಷಣೆ ಮಾಡತ್ತು.

ಈತ ಪುಣೆ ಐಸಿಸ್ ಪ್ರಕರಣದಲ್ಲಿ ಮೋಸ್ಟ್ ವಾಂಟೆಡ್ ಲಿಸ್ಟ್ ನಲ್ಲಿದ್ದ ಎನ್ನಲಾಗಿದ್ದು. ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ಶಹನವಾಜ್ ದೆಹಲಿಯ ನಿವಾಸಿಯಾಗಿದ್ದು. ಪುಣೆ ಪೊಲೀಸರ ವಶದಿಂದ ತಪ್ಪಿಸಿಕೊಂಡು ದೆಹಲಿಯಲ್ಲಿ ವಾಸವಾಗಿದ್ದ ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ದೆಹಲಿ ಪೊಲೀಸರು ಬಂಧಿಸಿದ್ದು. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಪುಣೆ ಐಸಿಸ್ ಮಾಡ್ಯೂಲ್ ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿಗಳನ್ನು ಬಂಧಿಸಲು ಎನ್‌ಐಎ ಕಾರ್ಯಾಚರಣೆ ನಡೆಸಿಡಾ ವೇಳೆ ಶಫಿ ಉಝಾಮಾ ಬಂಧನವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಕಾಗಿರುವ ನಾಲ್ವರು ಭಯೋತ್ಪಾದಕರ ಶಂಕಿತರ ಛಾಯಾಚಿತ್ರಗಳನ್ನು ಎನ್‌ಐಎ ಈ ಹಿಂದೆ ಬಿಡುಗಡೆ ಮಾಡಿತ್ತು ಅಲ್ಲದೆ ಅವರ ಬಗ್ಗೆ ಮಾಹಿತಿ ನೀಡುವವರಿಗೆ 3 ಲಕ್ಷ ರೂಪಾಯಿ ಬಹುಮಾನವನ್ನು ಘೋಷಿಸಿತ್ತು. ತಲ್ಹಾ ಲಿಯಾಖತ್ ಖಾನ್, ರಿಜ್ವಾನ್ ಅಬ್ದುಲ್ ಹಾಜಿ ಅಲಿ ಮತ್ತು ಅಬ್ದುಲ್ಲಾ ಫೈಯಾಜ್ ಶೇಖ್ ಅಲಿಯಾಸ್ ದೈಪರ್ವಾಲಾ ಅವರ ಹುಡುಕಾಟಕ್ಕಾಗಿ ಎನ್‌ಐಎ ತಂಡವು ದೇಶಾದ್ಯಂತ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಅದರಂತೆ ಓರ್ವ ಭಯೋತ್ಪಾದಕನನ್ನು ದೆಹಲಿ ಪೊಲೀಸರು ಶೋಧ ಕಾರ್ಯಾಚರಣೆಯ ನಂತರ ಬಂಧಿಸಿದ್ದಾರೆ. ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಇದನ್ನೂ ಓದಿ: Miya Community: ಮುಂದಿನ 10ವರ್ಷ BJPಗೆ ಮಿಯಾ ಸಮುದಾಯದ ಮತಗಳ ಅಗತ್ಯವಿಲ್ಲ: ಅಸ್ಸಾಂ ಸಿಎಂ

Advertisement

Udayavani is now on Telegram. Click here to join our channel and stay updated with the latest news.

Next