ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಲವ್ ಜಿಹಾದ್ ಪ್ರಕರಣವೊಂದು ಸದ್ದು ಮಾಡುತ್ತಿದೆ. ಮದುವೆಯಾಗಲು ಹೋಗಿದ್ದ ಜೋಡಿಯನ್ನು ಸಂಘಟನೆಗಳು ತಡೆದಿದ್ದು, ಇದೀಗ ಜೋಡಿಯು ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ,
ಮಾಧ್ಯಮಗಳ ಎದುರು ಬಂದ ಜಾಫರ್-ಚೈತ್ರಾ, “ನಾವು ಮೂರು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದೇವೆ. ಇಬ್ಬರು ಇಷ್ಟಪಟ್ಟೆ ಮದುವೆಗೆ ಮುಂದಾಗಿದ್ದೇವೆ. ನಾವು ಮದುವೆಯಾಗ್ತೀವೆ, ಚೆನ್ನಾಗಿರ್ತೀವೆ, ಕೇಳಲು ಅವರ್ಯಾರು ಎಂದು ಸಂಘಟನೆ ಕಾರ್ಯಕರ್ತರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘’ನನ್ನನ್ನು ಎಳೆದಾಡಿ, ಕೆಟ್ಟ ಕೆಟ್ಟದಾಗಿ ಬೈದು, ನನ್ನ ಗಂಡನಿಗೆ ಹಲ್ಲೆ ಮಾಡಿದ್ದಾರೆ. ಹಿಂದೂ ಹುಡುಗಿ ಬೇಕಾ- ಎಸ್ಸಿ ಹುಡುಗಿ ಬೇಕಾ ಅಂತ ಪತಿಯನ್ನು ಥಳಿಸಿದ್ದಾರೆ
ಇದನ್ನೂ ಓದಿ:ರಾಜಕಾಲುವೆ ಮಟ್ಟ ತಿಳಿಸಲಿದೆ “ವಾಟರ್ ಲೆವೆಲ್ ಸೆನ್ಸರ್’!
ಆ ದಿನ ಅವರು ಏನಾದರೂ ಮಾಡುತ್ತಾರೆಂದು ಪೊಲೀಸರು ನನ್ನನ್ನು ಮನೆಗೆ ಕಳುಹಿಸಲಿಲ್ಲ. ಮನೆಗೆ ಕಳುಹಿಸದೆ ಸಾಂತ್ವನ ಕೇಂದ್ರಕ್ಕೆ ಕಳುಹಿಸಿದ್ದಾರೆ. ಆರೋಪಿಗಳಿಗೆ ಸ್ಟೇಷನ್ ಬೇಲ್ ಕೊಟ್ಟು ಕಳುಹಿಸಿದ್ದಾರೆ. ನಮ್ಮ ಮೇಲೆ ಹಲ್ಲೆ ಮಾಡಿ, ಕೆಟ್ಟದಾಗಿ ಬೈದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ತೋಡಿಕೊಂಡಿದ್ದಾರೆ.