ಮಡಿಕೇರಿ: ಶಂಕಿತ ನಕ್ಸಲ್ ಮುಖಂಡ, 2010ರಲ್ಲಿ ಭಾಗಮಂಡಲ ವ್ಯಾಪ್ತಿಯ ಮುಂಡ್ರೋಟುವಿನ ಮಾಂಗುಡಿಮಲೆಯಲ್ಲಿ ಗ್ರಾಮಸ್ಥರಿಗೆ ಬೆದರಿಕೆ ಒಡ್ಡಿರುವ ಆರೋಪ ಎದುರಿಸುತ್ತಿರುವ ರೂಪೇಶ್‌ನನ್ನು ಬಿಗಿ ಭದ್ರತೆಯಲ್ಲಿ ಮಡಿಕೇರಿಯ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಮಡಿಕೇರಿ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿಡಲಾಗಿದ್ದ ರೂಪೇಶ್‌ನನ್ನು ಕೇರಳ ಭಯೋತ್ಪಾದಕ ನಿಗ್ರಹ ದಳ, ಕೇರಳ ಪೊಲೀಸರು ಮತ್ತು ಕೊಡಗು ಪೊಲೀಸ್ ಕಮಾಂಡೋಗಳು ಬಿಗಿ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಕರೆ ತಂದರು. ಪೊಲೀಸ್ ವಾಹನದಿಂದ ಕೆಳಗಿಳಿಯುತ್ತಿದ್ದಂತೆಯೇ “ನಕ್ಸಲ್‌ಬಾರಿ ಜಿಂದಾಬಾದ್, ಮಾವೋವಾದಿಗಳು ಅಪರಾಧಿಗಳಲ್ಲ, ಹುತಾತ್ಮ ನಕ್ಸಲರು ಅಮರವಾಗಲಿ’ ಎಂದು ಘೋಷಣೆ ಕೂಗಿದ.
ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ವೀರಪ್ಪ ವಿ.ಮಲ್ಲಾಪುರ ಅವರು ರಜೆಯಲ್ಲಿರುವುದರಿಂದ 1ನೇ ಅಪರ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಪವನೇಶ್ ಮುಂದೆ ಹಾಜರುಪಡಿಸಲಾಯಿತು. ಶನಿ ವಾ ರ ಸರಕಾರಿ ವಕೀಲರು ಹಾಜರಿಲ್ಲವಾದ್ದ ರಿಂದ ಅವರಿಗೆ ಆಕ್ಷೇಪಣೆ ಸಲ್ಲಿಸಲು ದಿನಾಂಕ ನಿಗದಿಗೊಳಿಸಿದ ನ್ಯಾಯಾಧೀಶರು, ವಿಚಾರಣೆಯನ್ನು ಮೇ 22ಕ್ಕೆ ಮುಂದೂಡಿದರು.
ರೂಪೇಶ್ ವಿರುದ್ಧ ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಆಂಧ್ರ ಪ್ರದೇಶದಲ್ಲಿ ನಕ್ಸಲ್ ಚಟುವಟಿಕೆ ಸಹಿ ತ ಒಟ್ಟು 38 ಪ್ರಕರಣಗಳಿವೆ. ಈತನ ವಿರುದ್ಧ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣಗಳೂ ದಾಖಲಾಗಿವೆ.
ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ 2 ಪ್ರತ್ಯೇಕ ಪ್ರಕರಣದ ವಿಚಾರಣೆಗಾಗಿ ಶನಿವಾರ ಈತ ನನ್ನು 6ನೇ ಬಾರಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ಬಳಿಕ ಆತನನ್ನು ಕೇರಳಕ್ಕೆ ಕರೆದೊಯ್ಯಲಾಯಿತು. ನ್ಯಾಯಾಲಯದ ಹೊರಭಾಗ ನಗರ ಠಾಣಾಧಿಕಾರಿ ಷಣ್ಮುಗ ನೇತೃತ್ವದಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ ಬಿಗಿ ಬಂದೂಬಸ್ತ್ ಮಾಡಲಾಗಿತ್ತು.