Advertisement
ಮಡಿಕೇರಿ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿಡಲಾಗಿದ್ದ ರೂಪೇಶ್‌ನನ್ನು ಕೇರಳ ಭಯೋತ್ಪಾದಕ ನಿಗ್ರಹ ದಳ, ಕೇರಳ ಪೊಲೀಸರು ಮತ್ತು ಕೊಡಗು ಪೊಲೀಸ್ ಕಮಾಂಡೋಗಳು ಬಿಗಿ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಕರೆ ತಂದರು. ಪೊಲೀಸ್ ವಾಹನದಿಂದ ಕೆಳಗೆ ಇಳಿಯುತ್ತಿದ್ದಂತೆಯೇ “ನಕ್ಸಲ್ ಬಾರಿ ಜಿಂದಾಬಾದ್, ಮಾವೋವಾದಿಗಳು ಅಪರಾಧಿಗಳಲ್ಲ, ಹುತಾತ್ಮ ನಕ್ಸಲರು ಅಮರವಾಗಲಿ’ ಎಂದು ಘೋಷಣೆ ಕೂಗಿದ.
ರೂಪೇಶ್ ವಿರುದ್ಧ ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಆಂಧ್ರ ಪ್ರದೇಶದಲ್ಲಿ ನಕ್ಸಲ್ ಚಟುವಟಿಕೆ ಸಹಿತ ಒಟ್ಟು 38 ಪ್ರಕರಣಗಳಿವೆ. ಈತನ ವಿರುದ್ಧ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣಗಳೂ ದಾಖಲಾಗಿವೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ 2 ಪ್ರತ್ಯೇಕ ಪ್ರಕರಣದ ವಿಚಾರಣೆಗಾಗಿ ಈತನನ್ನು 6ನೇ ಬಾರಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ಬಳಿಕ ಆತನನ್ನು ಕೇರಳಕ್ಕೆ ಕರೆದೊಯ್ಯಲಾಯಿತು. ನ್ಯಾಯಾಲಯದ ಹೊರಭಾಗ ನಗರ ಠಾಣಾಧಿಕಾರಿ ಷಣ್ಮುಗ ನೇತೃತ್ವದಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.