Advertisement

Naxal; ಸುಬ್ರಹ್ಮಣ್ಯ ಸನಿಹ ಶಂಕಿತ ನಕ್ಸಲರು ಪತ್ತೆ?

12:22 AM Mar 24, 2024 | Team Udayavani |

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ- ಕೊಡಗು ಗಡಿ ಭಾಗದ ಕೂಜಿಮಲೆಯ ಎಸ್ಟೇಟ್‌ ಅಂಗಡಿಗೆ ನಕ್ಸಲರು ಭೇಟಿ ನೀಡಿದ ವಾರದಲ್ಲೇ ಮಾ. 23ರಂದು ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಶಂಕಿತ ನಕ್ಸಲರು ಭೇಟಿ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Advertisement

ಶನಿವಾರ ಸಂಜೆ 6 ಗಂಟೆ ಸುಮಾರಿಗೆ ಸಣ್ಣದಾಗಿ ಮಳೆಯಾಗುತ್ತಿದ್ದ ಸಂದರ್ಭ ದಲ್ಲಿ ಶಂಕಿತರ ತಂಡ ಐನೆಕಿದು ಗ್ರಾಮದ ಅರಣ್ಯದಂಚಿನ ತೋಟದ ಮೂಲಕ ಆಗಮಿಸಿತ್ತು. ತೋಟದಲ್ಲಿದ್ದ ಕೆಲಸದವರ ಶೆಡ್‌ಗೆ ಭೇಟಿ ನೀಡಿದ ವೇಳೆ ಕೆಲಸದಾಳು ಶೆಡ್‌ನ‌ ಬಾಗಿಲು ಹಾಕಿದ್ದು, ಬಳಿಕ ಶಂಕಿತರ ತಂಡ ಅಲ್ಲೇ ಪಕ್ಕದಲ್ಲಿರುವ ತೋಟದ ಮಾಲಕರ ಮನೆಗೆ ತೆರಳಿ ಒಳಹೊಕ್ಕಿತ್ತು. ಮನೆಯವರ ಜತೆ ಸುಮಾರು ಒಂದು ತಾಸಿಗೂ ಅಧಿಕ ಕಾಲ ಮಾತುಕತೆ ನಡೆಸಿತ್ತು.

25 ಕಿ.ಮೀ. ದೂರ
ಕಳೆದ ವಾರ ನಕ್ಸಲರು ಕಾಣಿಸಿಕೊಂಡ ಕೂಜಿಮಲೆ ಮತ್ತು ಇಂದು ಕಾಣಿಸಿದ ಐನೆಕಿದು ನಡುವೆ ಸುಮಾರು 25 ಕಿ.ಮೀ. ಅಂತರವಿದೆ. ವಿಶೇಷ ಎಂದರೆ ನಕ್ಸಲ್‌ ನಿಗ್ರಹ ದಳ ನಿರಂತರ ಶೋಧ ಕಾರ್ಯ ನಡೆಸುತ್ತಿದ್ದರೂ ಇದೇ ಪರಿಸರದಲ್ಲಿ ಸುತ್ತಾಡುತ್ತಿದ್ದ ನಕ್ಸಲರು ಎಎನ್‌ಎಫ್ ತಂಡಕ್ಕೆ ಕಾಣಿಸಿರಲಿಲ್ಲ.

ಪರ್ವತದ ತಪ್ಪಲು
ನಕ್ಸಲರು ಭೇಟಿ ನೀಡಿದ ಪ್ರದೇಶ ಕುಮಾರಪರ್ವತ ಸಾಲಿನ ಪಾಟಿ ಕುಮೇರಿ ದಟ್ಟ ಕಾಡಿಗೆ ಹತ್ತಿರವಿದೆ. ಇಲ್ಲಿಂದ ಸೋಮವಾರಪೇಟೆ ಮತ್ತು ಇನ್ನೊಂದು ದಾರಿಯಾಗಿ ಗಾಳಿಬೀಡು, ಸಂಪಾಜೆ ಮೂಲಕ ಕೇರಳಕ್ಕೆ ಅರಣ್ಯದೊಳಗೆ ಸಂಪರ್ಕ ಸಾಧಿಸಲು ಸಾಧ್ಯವಿದೆ.

Advertisement

Udayavani is now on Telegram. Click here to join our channel and stay updated with the latest news.

Next