ಬೆಂಗಳೂರು: ನ್ಯಾಯಾಲಯದ ಆದೇಶ ಪಾಲಿಸದೆ ನಿರ್ಲಕ್ಷ್ಯ ಧೋರಣೆ ತೋರಿರುವ ಕುಣಿಗಲ್ ತಾಲೂಕಿನ ಹಿಂದಿನ ತಹಶೀಲ್ದಾರ್ ರಮೇಶ್ ಅವರನ್ನು ಅಮಾನತುಗೊಳಿಸಲು ಪರಿಶೀಲಿಸಿ ಎಂದು ಹೈಕೋರ್ಟ್ ರಾಜ್ಯಸರ್ಕಾರಕ್ಕೆ ಮೌಖೀಕ
ಸೂಚನೆ ನೀಡಿದೆ.
ಹುಲಿಯೂರುದುರ್ಗದ ರಾಜ್ಯ ಹೆದ್ದಾರಿಯ ರಸ್ತೆ ಅಗಲೀಕರಣದ ವೇಳೆ ಗ್ರಾಮಸ್ಥರಿಗೆ ಸೇರಿದ ಕೆಲ ಕಟ್ಟಡಗಳನ್ನು ನೆಲಸಮಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಆದೇಶ ಪಾಲಿಸದ ಸಂಬಂಧ ದಾಖಲಾಗಿದ್ದ ಸಿವಿಲ್ ನ್ಯಾಯಾಂಗ ನಿಂದನೆ ಪ್ರಕರಣ ಅರ್ಜಿ ವಿಚಾರಣೆಯನ್ನು ನ್ಯಾ.ಜಯಂತ್ ಪಟೇಲ್ ಹಾಗೂ ಎಸ್.ಸುಜಾತ ಅವರಿದ್ದ ವಿಭಾಗೀಯ ಪೀಠ ಸೋಮವಾರ ನಡೆಸಿತು.
ವಿಚಾರಣೆ ವೇಳೆ ನ್ಯಾಯಪೀಠ, ನ್ಯಾಯಾಂಗದ ಆದೇಶ ಪಾಲಿಸದ ಅಧಿಕಾರಿಯ ಕಾರ್ಯವೈಖರಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಈ ಪ್ರಕರಣದಲ್ಲಿ ನಿರ್ಲಕ್ಷ್ಯ ಧೋರಣೆ ತಾಳಿರುವ ಅಧಿಕಾರಿಯ ವಿರುದಟಛಿದ ನ್ಯಾಯಾಂಗ ನಿಂದನೆ ಕೈ ಬಿಡಲು ಆಗುವುದಿಲ್ಲ, ಪ್ರತಿವಾದಿಯಾಗಿರುವ ಕುಣಿಗಲ್ ತಾಲೂಕಿನ ಹಿಂದಿನ ತಹಶೀಲ್ದಾರ್ ರಮೇಶ್ ಅವರನ್ನು ಅಮಾನತುಗೊಳಿಸುವ ಸಂಬಂಧ ಪರಿಶೀಲಿಸಿ ಎಂದು ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಎ.ಎಸ್ ಪೊನ್ನಣ್ಣ ಅವರಿಗೆ ಸೂಚನೆ ನೀಡಿ ವಿಚಾರಣೆ ಮುಂದೂಡಿತು.
ಪ್ರಕರಣದ ಪ್ರತಿವಾದಿಗಳಾಗಿರುವ ತುಮಕೂರು ಜಿಲ್ಲಾಧಿಕಾರಿ ಮೋಹನ್ ರಾಜ್, ಕುಣಿಗಲ್ ತಾಲೂಕಿನ ಹಿಂದಿನ ತಹಶೀಲ್ದಾರ್ ರಮೇಶ್, ಯೋಜನಾ ನಿರ್ದೇಶನ ತ್ಯಾಗರಾಜು ವಿಚಾರಣೆಗೆ ಖುದ್ದು ಹಾಜರಾಗಿದ್ದರು.