Advertisement

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

11:46 PM Apr 30, 2024 | Team Udayavani |

ಹೊಸದಿಲ್ಲಿ: ಹಿಮಾಚಲ ಪ್ರದೇಶದ 2, ಹರಿಯಾಣ ಮತ್ತು ಮಹಾರಾಷ್ಟ್ರದ ತಲಾ 1 ಲೋಕಸಭಾ ಕ್ಷೇತ್ರ ಗಳಿಗೆ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಆದರೆ ಉತ್ತರ ಪ್ರದೇಶದ ಅಮೇಠಿ, ರಾಯ್‌ಬರೇಲಿಯ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರು ಘೋಷಣೆ ಬಾಕಿ ಇದ್ದು, ಸಸ್ಪೆನ್ಸ್‌ ಮುಂದುವರಿದಿದೆ.

Advertisement

2 ಪ್ರತಿಷ್ಠಿತ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆಗೆ ನಾಮಪತ್ರ ಸಲ್ಲಿಕೆಗೆ ಇನ್ನೂ 3 ದಿನ ಬಾಕಿ ಉಳಿದಿದೆ. ರಾಹುಲ್‌ ಗಾಂಧಿ, ಪ್ರಿಯಾಂಕಾ ವಾದ್ರಾ ಇನ್ನೂ ತಮ್ಮ ತೀರ್ಮಾನ ಪ್ರಕಟಿಸಿಲ್ಲ. ಹರಿಯಾಣದ ಗುರುಗ್ರಾಮದಿಂದ ಬಾಲಿವುಡ್‌ ನಟ ರಾಜ್‌ ಬಬ್ಬರ್‌, ಹಿಮಾಚಲ ಪ್ರದೇಶದ ಕಂಗ್ರಾದಿಂದ ಆನಂದ್‌ ಶರ್ಮಾಗೆ  ಪಕ್ಷ ಟಿಕೆಟ್‌ ನೀಡಿದೆ.

ಮಹಾರಾಷ್ಟ್ರದ ಮುಂಬಯಿ ಉ. ಲೋಕಸಭಾ ಕ್ಷೇತ್ರದಿಂದ ಭೂಷಣ್‌ ಪಾಟೀಲ್‌ ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next