Advertisement
ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇಬ್ರಾಹಿಂ ಅವರನ್ನು ಜೆಡಿಎಸ್ ಪಕ್ಷದಿಂದ ತತ್‌ಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಮಾಜಿ ಪ್ರದಾನಿ ಎಚ್.ಡಿ. ದೇವೇಗೌಡರು ಘೋಷಿಸಿದ್ದಾರೆ.
Related Articles
Advertisement
ಪಕ್ಷದ ಹಿತಕ್ಕಾಗಿ ಬಿಜೆಪಿ ಜತೆ ಲೋಕಸಭೆ ಚುನಾವಣೆಗಾಗಿ ಮೈತ್ರಿ ಮಾಡಿಕೊಳ್ಳಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಸರ್ವಾನುಮತದ ಅಧಿಕಾರ ನೀಡಲಾಗಿತ್ತು ಹಾಗೂ ಮೈತ್ರಿ ಬಗ್ಗೆ ಬಿಜೆಪಿ ನಾಯಕರ ಜತೆ ಚರ್ಚೆ ನಡೆಸಲು ರಾಷ್ಟ್ರೀಯ ಅಧ್ಯಕ್ಷರು ಮತ್ತು ಶಾಸಕಾಂಗ ಪಕ್ಷದ ನಾಯಕರಿಗೆ ಪೂರ್ಣ ಅಧಿಕಾರ ನೀಡಲಾಗಿತ್ತು. ಈ ಬಗ್ಗೆ ನಿರ್ಣಯ ಕೈಗೊಳ್ಳಲು ನಡೆದ ಎಲ್ಲ ಸಭೆಗಳಲ್ಲಿ ಇಬ್ರಾಹಿಂ ಅವರು ಹಾಜರಿದ್ದರು. ಆದರೂ ಅವರು ಪಕ್ಷಕ್ಕೆ ಹಾನಿ ಉಂಟು ಮಾಡುವ ವಿರೋಧಾಭಾಸದ ಹೇಳಿಕೆಗಳನ್ನು ನೀಡಿರುತ್ತಾರೆ. ಚಿಂತನ-ಮಂಥನ ಹೆಸರಲ್ಲಿ ಬೆಂಗಳೂರಿನಲ್ಲಿ 2023ರ ಅ.16ರಂದು ಸಮಾನ ಮನಸ್ಕರ ಸಭೆ ನಡೆಸಿ ಪಕ್ಷದ ನಾಯಕರ ವಿರುದ್ಧ ಬೇಜವಾಬ್ದಾರಿಯುತ ಹೇಳಿಕೆ ನೀಡಿ, ಸುಳ್ಳು ಆರೋಪಗಳನ್ನು ಮಾಡಿದ್ದಾರೆ.
ನವೆಂಬರ್ 15ರಂದು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಸಿ.ಕೆ. ನಾಣು ಕೇರಳದ ತಿರುವನಂತಪುರದಲ್ಲಿ ಅನಧಿಕೃತವಾಗಿ ಕರೆದಿದ್ದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿ, ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ವಿರೋಧಭಾಸದ ಹೇಳಿಕೆ ನೀಡಿ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ್ದಾರೆ.