Advertisement

ದೆಹಲಿಯಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ: ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ

05:50 PM Aug 04, 2022 | Team Udayavani |

ನವದೆಹಲಿ : ರಾಷ್ಟ್ರ ರಾಜಧಾನಿಯ ರೋಹಿಣಿ ಪ್ರದೇಶದಲ್ಲಿ ಗುರುವಾರ ಸಂಜೆ  ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು ಮತ್ತು ಬಾಂಬ್ ನಿಷ್ಕ್ರೀಯ ದಳ ದೌಡಾಯಿಸಿದ ಘಟನೆ ನಡೆದಿದೆ.

Advertisement

ಅಧಿಕಾರಿಗಳ ಪ್ರಕಾರ, ರೋಹಿಣಿ ಸೆಕ್ಟರ್ -9 ಡಿಸಿ ಚೌಕ್ ಬಳಿಯ ಪಾರ್ಕಿಂಗ್ ಪ್ರದೇಶದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದೆ.

ಸ್ಥಳದಲ್ಲಿ ಶ್ವಾನದಳ ಸೇರಿ ಅಧಿಕಾರಿಗಳು ಪರೀಶೀಲನೆ ನಡೆಸುತ್ತಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

ಸ್ವಾತಂತ್ರ್ಯ ದಿನಾಚರಣೆ ವೇಳೆ ವಿಧ್ವಂಸಕ ಕೃತ್ಯಗಳು ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next