Advertisement
ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಫುಟ್‌ಪಾತ್, ಬಸ್‌ಬೇ ಇಂಟರ್‌ಲಾಕ್ ಅಳವಡಿಸಿ ಪಾದಚಾರಿ ಮಾರ್ಗ ನಿರ್ಮಾಣ ಮಾಡಬೇಕು, ಎಂಐಟಿ ಬಳಿ ಬಸ್ ನಿಲ್ದಾಣದ ಬದಲು ಬಸ್ ಬೇ ವ್ಯವಸ್ಥೆ ಮಾಡಬೇಕು. ಫುಟ್‌ಪಾತ್‌ನಲ್ಲಿ ವಾಹನ ಪಾರ್ಕಿಂಗ್ ಸಮಸ್ಯೆ ತಪ್ಪಿಸಲು ರೇಲಿಂಗ್ ನಿರ್ಮಾಣ ಮಾಡಬೇಕು. ಈ ಬಗ್ಗೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಕೂಲಂಕಷ ಪರಿಶೀಲಿಸಬೇಕು ಎಂದರು. ಮಾಹೆಗೆ ಜವಾಬ್ದಾರಿ
ಸುಸ್ಥಿರ ಸಂಚಾರ ವ್ಯವಸ್ಥೆಯನ್ನು ಹೊಸ ತಂತ್ರಜ್ಞಾನದೊಂದಿಗೆ ಮುಂದಿನ ಭವಿಷ್ಯದ ದೃಷ್ಟಿಯಿಂದ ದೀರ್ಘಕಾಲೀನ ಮಾದರಿ ಯೋಜನೆಯನ್ನಾಗಿ ರೂಪಿಸಬೇಕಿದೆ. ಈ ಜವಾಬ್ದಾರಿಯನ್ನು ಮಣಿಪಾಲ ಮಾಹೆಯ (ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್) ಆರ್ಕಿಟೆಕ್ ವಿಭಾಗಕ್ಕೆ ನೀಡಿ ಶೀಘ್ರದಲ್ಲಿ ನೀಲನಕ್ಷೆ ಸಿದ್ಧಪಡಿಸಲು ಕ್ರಮ ಕೈಗೊಳ್ಳಬೇಕು. ರಸ್ತೆ ಅಗಲೀಕರಣ ಸಂದರ್ಭ ಸ್ಥಳಾಂತರ ಮಾಡುವ ವಿದ್ಯುತ್ ಕಂಬಗಳನ್ನು ಪ್ರಸ್ತುತ ಇರುವ ಗುತ್ತಿಗೆದಾರರಿಂದಲೇ ಮರು ನಿರ್ಮಾಣ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.
Related Articles
Advertisement