Advertisement

ಮಾತಿನ ಮನೆಯಲ್ಲಿ ‘ಸೂತ್ರಧಾರಿ’

03:27 PM Apr 23, 2023 | Team Udayavani |

ಸಂಗೀತ ನಿರ್ದೇಶಕ, ರ್ಯಾಪರ್‌ ಚಂದನ್‌ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ “ಸೂತ್ರಧಾರಿ’ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯಗೊಂಡಿದೆ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದ್ದು, ಸದ್ಯ ಲೂಪ್‌ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ಕೆಲಸ ಭರದಿಂದ ಸಾಗಿದೆ. ಚಂದನ್‌ ಶೆಟ್ಟಿ ನಾಯಕನಾಗಿ ನಟಿಸುವ ಜೊತೆಗೆ ಚಿತ್ರದ ಸಂಗೀತ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.

Advertisement

ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಡ್ಯಾಶ್‌ ಸಾಂಗ್‌ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆ ಪಡೆದು, ಮೆಚ್ಚುಗೆಗೆ ಪಾತ್ರವಾಗಿದೆ. ನಿರ್ಮಾಪಕ ನವರಸನ್‌ “ಈಗಲ್‌ ಮೀಡಿಯಾ ಕ್ರಿಯೇಷನ್ಸ್’ ಮೂಲಕ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಸೂತ್ರಧಾರಿ ಇವರ ನಿರ್ಮಾಣದ ಐದನೇ ಚಿತ್ರ.

ಕ್ರೈಮ್‌ ಥ್ರಿಲ್ಲರ್‌ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕಿರಣ್‌ ಕುಮಾರ್‌ ನಿರ್ದೇಶಿಸುತ್ತಿದ್ದಾರೆ. ಪಿ.ಕೆ.ಹೆಚ್‌ ದಾಸ್‌ ಛಾಯಾಗ್ರಹಣ, ಸತೀಶ್‌ ಚಂದ್ರಯ್ಯ ಸಂಕಲನ ಹಾಗೂ ಮೋಹನ್‌ ನೃತ್ಯ ಸಂಯೋಜನೆ ಚಿತ್ರಕ್ಕಿದೆ. ಚಂದನ್‌ ಶೆಟ್ಟಿ ಅವರಿಗೆ ನಾಯಕಿಯಾಗಿ ಅಪೂರ್ವ ನಟಿಸಿದ್ದಾರೆ. ಸಂಜನಾ ಆನಂದ್‌ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ. ತಬಲನಾಣಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next