ಬೆಂಗಳೂರು: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರಸ್ವಾಮೀಜಿಗಳ ಪೂರ್ವಾಶ್ರಮದ ತಾಯಿ ಶಿವನಾಗಮ್ಮ (90) ಸೋಮವಾರ ಬೆಳಿಗ್ಗೆ ನಿಧನರಾದರು.
ಮೃತರಿಗೆ ನಾಲ್ವರು ಪುತ್ರರು ಹಾಗೂ ಇಬ್ಬರು ಪುತ್ರಿಯರಿದ್ದಾರೆ. ಮೈಸೂರು ಜಿಲ್ಲೆಯ ಸುತ್ತೂರಿನಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಸುತ್ತೂರು ಮಠದ ಮೂಲಗಳು ತಿಳಿಸಿವೆ
ಮುಖ್ಯಮಂತ್ರಿಗಳ ಸಂತಾಪ: ಶಿವನಾಗಮ್ಮ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಕೂಳೂರು ಸೇತುವೆಗೆ ಮತ್ತೆ ‘ತೇಪೆ ಭಾಗ್ಯ’! :ವಾಹನ ಸವಾರರ ಸಂಚಾರಕ್ಕೆ ಸಂಚಕಾರ!
ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಧ್ಯಾತ್ಮಿಕ ಸಾಧನೆಯಲ್ಲಿ ಶಿವವನಾಗಮ್ಮ ಅವರು ಗಾಢ ಪ್ರಭಾವ ಬೀರಿದ್ದರು. ಸಾಹಿತ್ಯ, ಸಂಸ್ಕೃತಿ, ಆಧ್ಯಾತ್ಮಿಕ ವಿಷಯಗಳ ಬಗ್ಗೆ ಆಳವಾದ ಜ್ಞಾನವನ್ನು ಹೊಂದಿದ್ದ ಅವರು ತಮ್ಮ ಮಕ್ಕಳು ಸನ್ಮಾರ್ಗದಲ್ಲಿ ನಡೆಯಲು ಪ್ರೇರೇಪಿಸಿದ್ದರು. ಮತೃರ ಆತ್ಮಕ್ಕೆ ಸದ್ಗತಿ ದೊರೆಯಲಿ ಹಾಗೂ ಅವರ ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.