Advertisement

ಇಂದಿನಿಂದ ಸುತ್ತೂರು ಜಾತ್ರೆ ಆರಂಭ

10:37 PM Jan 20, 2020 | Lakshmi GovindaRaj |

ಮೈಸೂರು: ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವ, ನಂಜನಗೂಡು ತಾಲೂಕಿನ ಸುತ್ತೂರು ಕ್ಷೇತ್ರದಲ್ಲಿ ಜ.21ರಿಂದ 26ರವರೆಗೆ ವಿಜೃಂಭಣೆಯಿಂದ ಜರುಗಲಿದೆ. ಆರು ದಿನಗಳವರೆಗೆ ನಡೆಯಲಿರುವ ಜಾತ್ರಾ ಮಹೋತ್ಸವಕ್ಕೆ ರಾಜ್ಯ ಮತ್ತು ಹೊರರಾಜ್ಯಗಳಿಂದ ಸುಮಾರು 15 ರಿಂದ 20 ಲಕ್ಷ ಭಕ್ತರು ಬರುವ ನಿರೀಕ್ಷೆಯಿದೆ.

Advertisement

ಜ.21ರಂದು ವೀರಭದ್ರೇಶ್ವರ ಕೊಂಡೋತ್ಸವ, 23ರಂದು ರಥೋತ್ಸವ, 24ರಂದು ಮಹದೇಶ್ವರ ಕೊಂಡೋತ್ಸವ, 25ರಂದು ತೆಪ್ಪೋತ್ಸವಗಳ ಜತೆಗೆ ಲಕ್ಷ ದೀಪೋತ್ಸವ, ಹಾಲರವಿ ಉತ್ಸವ ಮುಂತಾದ ಧಾರ್ಮಿಕ ಕಾರ್ಯಕ್ರಮಗಳ ಜತೆಗೆ ವೈವಿಧ್ಯಮಯ ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಕ್ರೀಡಾ ಚಟುವಟಿಕೆಗಳು ಜರುಗಲಿವೆ.

ಮಂಗಳವಾರ ಬೆಳಗ್ಗೆ 4 ಗಂಟೆಗೆ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯ ವರಿಂದ ಕತೃ ಗದ್ದುಗೆ ಅನುಜ್ಞೆ, ಮಹಾ ಸಂಕಲ್ಪಪೂರ್ವಕ ಮಹಾ ರುದ್ರಾಭಿಷೇಕದೊಂದಿಗೆ ಪೂಜಾ ಉತ್ಸವ ಆರಂಭಗೊಳ್ಳಲಿದೆ. ಜ.26ರಂದು ಬೆಳಗ್ಗೆ 10.30ಕ್ಕೆ ತುಮಕೂರಿನ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಹಾಗೂ

ಆದಿಚುಂಚನ ಗಿರಿ ಮಹಾಸಂಸ್ಥಾನ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರ ಸಮ್ಮುಖದಲ್ಲಿ ಕೃಷಿ ಮೇಳ ಮತ್ತು ವಸ್ತು ಪ್ರದರ್ಶನದ ಸಮಾರೋಪ ಸಮಾರಂಭ ನಡೆಯಲಿದೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next