Advertisement
ಬಲೋಡ್ನ ದೊಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಭಾನುಪ್ರತಾಪುರ್-ದಳ್ಳಿರಾಜರ ರಸ್ತೆಯ ಚೌರಹಾಪವಾಡ ಬಳಿ ಅಪಘಾತ ಸಂಭವಿಸಿದ್ದು ಟ್ರಕ್ ಚಾಲಕನ ಅವಾಂತರದಿಂದ ಈ ದುರಂತ ಸಂಭವಿಸಿದೆ ಎನ್ನಲಾಗಿದ್ದು ಕುಟುಂಬದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಕಾರಿನಲ್ಲಿ ವಾಪಸ್ಸಾಗುತ್ತಿದ್ದ ಸಂದರ್ಭ ತಪ್ಪು ದಿಕ್ಕಿನಲ್ಲಿ ಬಂದ ಟ್ರಕ್ ಕಾರಿಗೆ ನೇರವಾಗಿ ಡಿಕ್ಕಿ ಹೊಡೆದಿದೆ ಪರಿಣಾಮ ಆರು ಮಂದಿ ಸ್ಥಳದಲ್ಲೇ ಮೃತಪಟ್ಟು ಏಳು ಮಂದಿ ಗಂಭೀರ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರು ಜಿಲ್ಲೆಯ ಗುಂಡರ್ದೇಹಿ ಪ್ರದೇಶದ ನಿವಾಸಿಗಳು ಎಂದು ಹೇಳಲಾಗಿದ್ದು, ಅವರು ದೌಂಡಿಯಲ್ಲಿರುವ ಸಂಬಂಧಿಕರ ಮಗುವಿನ ನಾಮಕರಣ ಸಮಾರಂಭದಲ್ಲಿ ಭಾಗಿಯಾಗಿ ಬಳಿಕ ಗುರೆಡಾಕ್ಕೆ ಹಿಂತಿರುಗುತ್ತಿದ್ದರು ಎನ್ನಲಾಗಿದೆ.
Related Articles
Advertisement
ಇದನ್ನೂ ಓದಿ: ಕಾಶ್ಮೀರದಲ್ಲಿ ಮಾದಕ ಜಾಲ: 8,000 ಕೆ.ಜಿ. ಡ್ರಗ್ಸ್ ವಶ- 5ವರ್ಷದಲ್ಲಿ 6,500 ಪ್ರಕರಣ