Advertisement

10ರಂದು ಬಿಜೆಪಿಯಿಂದ ಸುವರ್ಣಸೌಧ ಮುತ್ತಿಗೆ

06:25 AM Dec 03, 2018 | Team Udayavani |

ಹುಬ್ಬಳ್ಳಿ: ರೈತರ ಸಾಲ ಮನ್ನಾ ಹಾಗೂ ಕಬ್ಬು ಬೆಳೆಗಾರರ ಬಾಕಿ ಪಾವತಿಗೆ ಆಗ್ರಹಿಸಿ ಡಿ.10ರಂದು ಬಿಜೆಪಿ ವತಿಯಿಂದ ಬೆಳಗಾವಿಯಲ್ಲಿ ಬೃಹತ್‌ ಮೆರವಣಿಗೆ ನಡೆಸಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್‌ ಹೇಳಿದರು. 

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಮುಖಂಡರು, ಕಾರ್ಯಕರ್ತರು, ರೈತರು ಪಾಲ್ಗೊಳ್ಳಲಿದ್ದಾರೆ. ರೈತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸುವರ್ಣ ಸೌಧದ ಒಳಗೆ ಹಾಗೂ ಹೊರಗೆ ಧರಣಿ ನಡೆಸಲಾಗುವುದು. ನಾನು ಮುಖ್ಯಮಂತ್ರಿಯಾಗಿದ್ದಾಗ ಎಸ್‌ಎಪಿ ಕಾಯ್ದೆ ಜಾರಿಗೊಳಿಸಿದ್ದೆ. ಸಕ್ಕರೆ ಕಾರ್ಖಾನೆ ಮಾಲೀಕರು ತಪ್ಪು ಮಾಡಿದರೆ ಅವರನ್ನು ಕಾರಾಗೃಹಕ್ಕೆ ಕಳುಹಿಸಬಹುದಾಗಿತ್ತು. ಆದರೆ ಕಾಂಗ್ರೆಸ್‌ ಸರ್ಕಾರ ಸಕ್ಕರೆ ಕಾರ್ಖಾನೆ ಮಾಲೀಕರ ಲಾಬಿಗೆ ಮಣಿದು ಕಾಯ್ದೆಗೆ ತಿದ್ದುಪಡಿ ತಂದಿತು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next