Advertisement

ಸುವರ್ಣ ತ್ರಿಭುಜ ದೋಣಿ ದುರಂತ: ಮೀನುಗಾರರ ಕುಟುಂಬಕ್ಕೆ 10 ಲಕ್ಷ ಹೆಚ್ಚುವರಿ ಪರಿಹಾರ

06:05 PM Nov 19, 2020 | sudhir |

ಮಲ್ಪೆ: ಸುವರ್ಣ ತ್ರಿಭುಜ ಬೋಟ್‌ ದುರಂತದಲ್ಲಿ ಮೃತಪಟ್ಟ 7 ಮೀನುಗಾರರ ಕುಟುಂಬಗಳಿಗೆ ವಿಶೇಷ ಪ್ರಕರಣ ದಡಿಯಲ್ಲಿ ಹೆಚ್ಚುವರಿ ಪರಿಹಾರವಾಗಿ ತಲಾ 10 ಲಕ್ಷ ರೂಪಾಯಿಗಳನ್ನು ಮಂಜೂರು ಮಾಡಿದ ಕರ್ನಾಟಕ ಸರಕಾರದ ನಿರ್ಧಾರವನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ ಸ್ವಾಗತಿಸಿದ್ದಾರೆ.

Advertisement

ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್‌ ಮುಳುಗಡೆಯಾಗಿ ಕಣ್ಮರೆಯಾದ 7 ಮಂದಿ ಮೀನುಗಾರರ ಕುಟುಂಬಸ್ಥರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಮಾಡಿದ ಮನವಿಗೆ ಸ್ಪಂದಿಸಿ, ಮೀನುಗಾರರ ಬಗ್ಗೆ ತಮ್ಮ ಕಾಳಜಿಯನ್ನು ಪ್ರದರ್ಶಿಸಿದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾಗೂ ಪರಿಹಾರ ಮಂಜೂರಾತಿಗೆ ವಿಶೇಷ ಮುತುವರ್ಜಿ ವಹಿಸಿದ ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರರ ಮುಖಂಡ ನಾಡೋಜ ಡಾ ಜಿ ಶಂಕರ್‌ ಸಂಸದರಾದ ನಳಿನ್‌ ಕುಮಾರ್‌ ಕಟೀಲು, ಶೋಭಾ ಕರಂದ್ಲಾಜೆ, ಶಾಸಕ ಕೆ ರಘುಪತಿ ಭಟ್‌ ಹಾಗೂ ಕರಾವಳಿಯ ಎಲ್ಲಾ ಶಾಸಕರಿಗೆ ಸಮಸ್ತ ಮೀನುಗಾರರ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next