ಕೋಲ್ಕತ್ತಾ : ಪಶ್ಚಿಮ ಬಂಗಾಳದ ವಿಧಾನ ಸಭಾ ಕಲಾಪದಲ್ಲಿ ಮಾತಿನ ಚಕಮಕಿ ನಡೆದಿದ್ದು, ಪ್ರತಿಪಕ್ಷದ ನಾಯಕ ಸುವೇಂದು ಅಧಿಕಾರಿ ಸೇರಿ ಹಲುವ ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿರುವುದಕ್ಕೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶಿಸ್ತಿಲ್ಲದಂತೆ ವರ್ತಿಸಿದ್ದಾರೆ ಎಂದು ಗರಂ ಆಗಿದ್ದಾರೆ.
ಇದನ್ನೂ ಓದಿ : ಬಸವ ಅಂತರರಾಷ್ಟ್ರೀಯ ಮ್ಯೂಸಿಯಂ ನಿರ್ಮಾಣ ಚುರುಕುಗೊಳಿಸಲು ಮುಖ್ಯಮಂತ್ರಿ ಸೂಚನೆ
ಸಭಾತ್ಯಾಗ ಮಾಡಿದ ಬಳಿಕ ರಾಷ್ಟ್ರೀಯ ಸುದ್ದಿ ಸಂಸ್ಥೆ ಎ ಎನ್ ಐ ನೊಂದಿಗೆ ಮಾತನಾಡಿದ ಅಧಿಕಾರಿ, “ಮುಖ್ಯಮಂತ್ರಿ ಬ್ಯಾನರ್ಜಿ ಅವರು ನಂದಿಗ್ರಾಮದಲ್ಲಿ ಸೋಲನುಭವಿಸಿರುವ ಬಗ್ಗೆ ಪ್ರಸ್ತಾಪಿಸಲು ನಾನು ಮುಂದಾಗಿದ್ದೆ. ಆದರೆ ಸ್ಪೀಕರ್ ಅದಕ್ಕೆ ಅವಕಾಶ ನೀಡಲಿಲ್ಲ. ಮತ್ತೆ ನಾನ್ಯಾಕೆ ಇಲ್ಲಿರಬೇಕು ಎಂದು ಅವರು ಹೇಳಿದ್ದಾರೆ.
ಏತನ್ಮಧ್ಯೆ, ರಾಜ್ಯಪಾಲರ ಭಾಷಣಕ್ಕೆ ಅಡ್ಡಿಪಡಿಸಿದ್ಧ ಬಿಜೆಪಿ ಶಾಸಕರ ವಿರುದ್ಧ ಬ್ಯಾನರ್ಜಿ ಸಿಡಿದಿದ್ದು, ಬಿಜೆಪಿ ಶಾಸಕರು ಶಿಸ್ತಿಲ್ಲದಂತೆ ವರ್ತಿಸುತ್ತಿದ್ದಾರೆ. ಸೌಜನ್ಯ, ಶಿಸ್ತು ಇಲ್ಲ ಎಂದು ಅವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಹೊಸದಾಗಿ ರಚನೆಯಾದ ಪಶ್ಚಿಮ ಬಂಗಾಳದ ವಿಧಾನಸಭೆಯ ಮೊದಲ ಅಧಿವೇಶನದಲ್ಲಿ ರಾಜ್ಯಪಾಲ ಜಗದೀಪ್ ಧನಕರ್ ಅವರ ಭಾಷಣಕ್ಕೆ ಬಿಜೆಪಿಯ ಶಾಸಕರು ಅಡ್ಡಿಪಡಿಸಿದ್ದರು.
ಇದನ್ನೂ ಓದಿ : ಖಾಲಿ ಪಾತ್ರೆಗಳು ಬಹಳ ಶಬ್ದ ಮಾಡುತ್ತವೆ : ಯೋಗೀಶ್ವರ್-ಯತ್ನಾಳ್ ಗೆ ಡಿಕೆಶಿ ಟಾಂಗ್