Advertisement
ಹಳ್ಳಿಗಳನ್ನು ಸಂಪೂರ್ಣವಾಗಿ ಸ್ವತ್ಛ ಮತ್ತು ಸುಂದರವಾಗಿಟ್ಟು ಕೊಳ್ಳುವುದು ಈ ಆಂದೋಲನದ ಮುಖ್ಯ ಧ್ಯೇಯವಾಗಿದೆ. ನಗರ ಜಿಲ್ಲಾ ಪಂಚಾಯ್ತಿ ಯಲ್ಲಿ 93 ಗ್ರಾಮ ಪಂಚಾಯ್ತಿಗಳಿವೆ. ಈ ಗ್ರಾಮ ಪಂಚಾಯ್ತಿಯಲ್ಲಿ ಸುಮಾರು 700ಕ್ಕೂ ಅಧಿಕ ಹಳ್ಳಿಗಳಿವೆ. ಈ ಎಲ್ಲಾ ಹಳ್ಳಿಗಳಲ್ಲೂ “ನಮ್ಮ ಗ್ರಾಮ ನಮ್ಮ ಜವಾಬ್ದಾರಿ’ ಎಂಬ ಧ್ಯೇಯೋದ್ದೇಶದೊಂದಿಗೆ ಹಾಗೂ “ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ’ ಎಂಬ ಘೋಷ ವಾಕ್ಯದಡಿಯಲ್ಲಿ ಫೆ. 15ರ ವರೆಗೆ ಒಂದು ತಿಂಗಳ ಕಾಲ ಜಾಗೃತಿ ಆಂದೋಲನ ನಡೆಯಲಿದೆ. ಈ ವೇಳೆ ತ್ಯಾಜ್ಯ ನಿರ್ವಹಣೆ ಬಗ್ಗೆ ಜನರಲ್ಲಿ ಅರಿವಿನ ಬೀಜ ಬಿತ್ತಲಾಗುತ್ತದೆ.
Related Articles
Advertisement
ತ್ಯಾಜ್ಯ ಸಂಪನ್ಮೂಲ ಘಟಕಗಳ ಸ್ಥಾಪನೆ: “ನಮ್ಮ ಗ್ರಾಮ ನಮ್ಮ ಜವಾಬ್ದಾರಿ’ ಪರಿಕಲ್ಪನೆಯಂತೆ ಹಳ್ಳಿ ಗಳನ್ನು ಕಸಮುಕ್ತ ಮಾಡುವ ಗುರಿ ಹೊಂದಲಾಗಿದೆ. ಪ್ರತಿಯೊಂದು ಗ್ರಾಮಗಳನ್ನು ತ್ಯಾಜ್ಯ ಮುಕ್ತ ಮಾಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಹಂತ-ಹಂತವಾಗಿ “ಸ್ವತ್ಛ ಸಂಕೀರ್ಣ’ (ತ್ಯಾಜ್ಯ ಸಂಪನ್ಮೂಲ ಘಟಕ)ಗಳನ್ನು ಸ್ಥಾಪಿಸಲಾ ಗುತ್ತದೆ ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿಯ ಉಪಕಾರ್ಯದರ್ಶಿ ಸಿದ್ದರಾಮಯ್ಯ ಹೇಳಿದ್ದಾರೆ.ಘಟಕ ಸ್ಥಾಪನೆ ನಂತರ ಗ್ರಾಮ, ಮನೆ, ಹೋಟೆಲ್, ಅಂಗಡಿ- ಮುಗಟ್ಟು, ಸಂತೆ ಜಾತ್ರೆ ಸೇರಿದಂತೆ ಇನ್ನಿತರ ಸ್ಥಳಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಮೂಲದಲ್ಲಿಯೇ ಹಸಿ ಮತ್ತು ಒಣ ತ್ಯಾಜ್ಯವನ್ನಾಗಿ ವಿಂಗಡಿಸಿ ವೈಜ್ಞಾನಿಕವಾಗಿ ವಿಲೇ ವಾರಿ ಮಾಡುವ ಕಾರ್ಯ ನಡೆಯಲಿದೆ. ಹಾಗೆಯೇ ಗ್ರಾಮೀಣ ಜನರು ಸ್ವಯಂ ಪ್ರೇರಿತರಾಗಿ ತ್ಯಾಜ್ಯ ವಿಂಗಡನೆಯ ಅಭ್ಯಾಸವನ್ನು ರೂಢಿಸಿ ಕೊಳ್ಳುವಕುರಿತಂತೆ ಪ್ರರೇಪಿಸಲಾಗುವುದು ಎಂದು ತಿಳಿಸಿದ್ದಾರೆ.
ಹಳ್ಳಿಗಳನ್ನು ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಸ್ವತ್ಛ ಭಾರತ್ ಮಿಷನ್ ಅಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ ಇಲಾಖೆ “ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ’ ಕಾರ್ಯಕ್ರಮ ರೂಪಿಸಿದೆ. ಈಗಾಗಲೇ ಆರಂಭವಾಗಿರುವ ಈ ಜಾಗೃತಿ ಆಂದೋಲನ ಫೆ.15ರ ವರೆಗೂ ನಡೆಯಲಿದೆ.
ಕೆ.ಶಿವರಾಮೇಗೌಡ, ಸಿಇಒ ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ
ದೇವೇಶ ಸೂರಗುಪ್ಪ