Advertisement

ಮುಂದಿನ ಶರಣ ಸಂಸ್ಕೃತಿ ಉತ್ಸವದ ಗೌರವ ಅಧ್ಯಕ್ಷರಾಗಿ ವನಶ್ರೀ ಮಠದ ಸ್ವಾಮೀಜಿ ಆಯ್ಕೆ

06:49 PM Oct 20, 2021 | Team Udayavani |

ಚಿತ್ರದುರ್ಗ: ಜಗದ್ಗುರು ಮುರುಘಾರಾಜೇಂದ್ರ ಬೃಹನ್ಮಠದಿಂದ ನಡೆಯುವ 2022ನೇ ಸಾಲಿನ ಶರಣ ಸಂಸ್ಕೃತಿ ಉತ್ಸವದ ಗೌರವಾಧ್ಯಕ್ಷರಾಗಿ ವನಶ್ರೀ ಮಠದ ಬಸವಕುಮಾರ ಸ್ವಾಮೀಜಿ, ಕಾರ್ಯಾಧ್ಯಕ್ಷರಾಗಿ ಖನಿಜ ನಿಗಮದ ಅಧ್ಯಕ್ಷ ಎಸ್‌.ಲಿಂಗಮೂರ್ತಿ ಅವರನ್ನು ಆಯ್ಕೆ ಮಾಡಲಾಗಿದೆ.

Advertisement

ಮುರುಘಾ ಮಠದ ರಾಜಾಂಗಣದಲ್ಲಿ ಮಂಗಳವಾರ ಡಾ| ಶ್ರೀ ಶಿವಮೂರ್ತಿ ಮುರುಘಾ ಶರಣರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ವೇಳೆ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ, ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಶ್ರೀ ಶಾಂತವೀರ ಸ್ವಾಮೀಜಿ, ಶ್ರೀ ಬಸವಪ್ರಭು ಸ್ವಾಮೀಜಿ, ಶ್ರೀ ಬಸವ ಮಡಿವಾಳ ಮಾಚಿದೇವ ಸ್ವಾಮೀಜಿ, ಶ್ರೀ ಶಿವಬಸವ ಸ್ವಾಮೀಜಿ, ಖನಿಜ ನಿಗಮದ ಅಧ್ಯಕ್ಷ ಎಸ್‌. ಲಿಂಗಮೂರ್ತಿ ಸೇರಿದಂತೆ ವಿವಿಧ ಮಠಾ ಧೀಶರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next