Advertisement
ಅಯೋಧ್ಯೆಯಲ್ಲಿ ಜ.22ರಂದು ನಡೆಯುವ ರಾಮಮಂದಿರ ಉದ್ಘಾಟನೆ ಸಮಾರಂಭದಲ್ಲಿ ಶಂಕರಾಚಾರ್ಯ ಮಠದ ಸ್ವಾಮೀಜಿಗಳು ಭಾಗವಹಿಸದಿರಲು ನಿರ್ಧರಿಸಿರುವ ಬಗ್ಗೆ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿ, ಶಂಕರಾಚಾರ್ಯ ಮಠದ ಸ್ವಾಮೀಜಿಗಳ ಹಿನ್ನೆಲೆ, ರಾಜಕೀಯ ನಿಲುವು ಯಾವುದೆಂದು ನಮಗೆ ಗೊತ್ತಿದೆ. 2014ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರನ್ನು ಸೋಲಿಸಲು ಮುಂದಾಗಿದ್ದವರು ಮಠದಲ್ಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಯುಪಿಎ ಸರಕಾರ ಒತ್ತಡ ಹೇರಿ ಜಯೇಂದ್ರ ಸರಸ್ವತಿ ಸ್ವಾಮೀಜಿ ಅವರನ್ನು ಬಂಧಿಸಲು ಹೊರಟಾಗ ಶಂಕರಾಚಾರ್ಯ ಮಠದ ಸ್ವಾಮೀಜಿಗಳು ಧ್ವನಿ ಇಲ್ಲದೆ ಸುಮ್ಮನೆ ಕುಳಿತಿದ್ದರು. ಇವತ್ತು ಒಳ್ಳೆಯ ಕೆಲಸ ಮಾಡುತ್ತಿರುವಾಗ ಅಪಸ್ವರ ಎತ್ತುತ್ತಿದ್ದಾರೆ. ಇದಕ್ಕೆ ಬೆಲೆ ಕೊಡುವ ಅಗತ್ಯ ಇಲ್ಲ ಎಂದರು. Advertisement
Ayodhya: ಸ್ವಾಮೀಜಿಗಳು ಅಸಂಬದ್ಧ ಮಾತು ಆಡಬಾರದು: ಪ್ರತಾಪಸಿಂಹ
10:35 PM Jan 19, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.