ಮುಂಬಯಿ: ಸಮಾಜಮುಖೀ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡು ಕಲೆ, ಸಾಹಿತ್ಯ, ಕ್ರೀಡೆ, ಆರೋಗ್ಯ, ಸಾಂಸ್ಕೃತಿಕ ಇತ್ಯಾದಿ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಸೇವಾ ನಿರತ ಬಂಟ್ವಾಳ ತಾಲೂಕು ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವರ್ಷಂಪ್ರತಿ ಕೊಡಮಾಡುವ, ಈ ಬಾರಿಯ 2019ನೇ ಸಾಲಿನ ಸ್ವಸ್ತಿಸಿರಿ ರಾಜ್ಯ ಪ್ರಶಸ್ತಿಯಲ್ಲೊಂದಾದ ಉದ್ಯಮ-ಸಮಾಜ ಸೇವಾ ಸ್ವಸ್ತಿಸಿರಿ ರಾಜ್ಯ ಪ್ರಶಸ್ತಿ-2019ನ್ನು ಸಾಫಲ್ಯ ಸೇವಾ ಸಂಘದ ಅಧ್ಯಕ್ಷ ಶ್ರೀನಿವಾಸ ಪಿ. ಸಾಫಲ್ಯ ಇವರಿಗೆ ಪ್ರದಾನಿಸಿ ಗೌರವಿಸಲಾಯಿತು.
ಫೆ. 10ರಂದು ಪುಂಜಾಲಕಟ್ಟೆಯಲ್ಲಿ ನಡೆದ ಸ್ವಸ್ತಿಕ್ ಫ್ರೆಂಡ್ಸ್ ಸಂಸ್ಥೆಯ 35ನೇ ವಾರ್ಷಿಕ ಸಂಭ್ರಮದಲ್ಲಿ 11ನೇ ವಾರ್ಷಿಕ ಉಚಿತ ಸಾಮೂಹಿಕ ವಿವಾಹ ನೆರವೇರಿತು. ಪುಂಜಾಲಕಟ್ಟೆಯ ಬಂಗ್ಲೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಸಮಾರಂಭದ ಅಧ್ಯಕ್ಷತೆ ಯನ್ನು ಶಾಸಕ ರಾಜೇಶ್ ನಾಯ್ಕ ಉಳಿಪಾಡಿ ಗುತ್ತು ವಹಿಸಿದ್ದು ಉದ್ಯಮಿ ವಸಂತ ಪೈ ಬದಿಯಡ್ಕ ಸಭಾ ಕಾರ್ಯಕ್ರಮ ಉದ್ಘಾಟಿಸಿದರು.
ಮಂಗಳೂರು ಲೋಕಸಭಾ ಸಂಸದ ನಳಿನ್‌ಕುಮಾರ್ ಕಟೀಲ್ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು, ಶ್ರೀನಿವಾಸ ಸಾಫಲ್ಯ ಇವರಿಗೆ ರಾಜ್ಯ ಪ್ರಶಸ್ತಿ ಪ್ರದಾನಿಸಿ ಶುಭಹಾರೈಸಿದರು. ಕರ್ನಾಟಕ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ, ಬೆಂಗಳೂರು ನ್ಯಾಯವಾದಿ ಸ್ವರ್ಣಲತಾ ಹೆಗ್ಡೆ, ಬಿಜೆಪಿ ಧುರೀಣ ಹರಿಕೃಷ್ಣ ಬಂಟ್ವಾಳ, ಉದ್ಯಮಿಗಳಾದ ನಿತ್ಯಾನಂದ ಪೂಜಾರಿ ಕೆಂತಲೆ, ವಸಂತ ಹೆಗ್ಡೆ ಬೆಂಗಳೂರು, ಮೋಹನ್ ಚೌಧುರಿ, ಓಂ ಪ್ರಸಾದ್, ಹರೀಂದ್ರ ಪೈ ಸೇರಿದಂತೆ ಗಣ್ಯರು ಉಪಸ್ಥಿತರಿದ್ದು ವಿವಿಧ ಕ್ಷೇತ್ರಗಳಲ್ಲಿ ಗಮನೀಯ ಸಾಧನೆಗೈದ ಸಾಧಕರನ್ನು ಪ್ರಶಸ್ತಿ ಪ್ರದಾನಿಸಿ ಗೌರವಿಸಲಾಯಿತು.
ಕ್ಲಬ್‌ನ ಸ್ಥಾಪಕಾಧ್ಯಕ್ಷ ಎಂ. ತುಂಗಪ್ಪ ಬಂಗೇರ, ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಗೌರವಾಧ್ಯಕ್ಷ ಅಬ್ದುಲ್ಲ ಪಿ., ಕೋಶಾಧಿಕಾರಿ ರಾಜೇಶ್ ಪಿ. ಬಂಗೇರ ಪುಳಿಮಜಲು, ಮಾಜಿ ಅಧ್ಯಕ್ಷ ಮಾಧವ ಬಂಗೇರ, ಅಬ್ದುಲ್ ಹಮೀದ್, ರತ್ನಾಕರ ಪಿ.ಎಂ., ಗಿರೀಶ್ ಸಾಲ್ಯಾನ್ ಮತ್ತಿತರ ಸದಸ್ಯರು ಉಪಸ್ಥಿತರಿದ್ದರು. ಕ್ಲಬ್ ಮಾಜಿ ಅಧ್ಯಕ್ಷ ಪ್ರಭಾಕರ ಪಿ.ಎಂ ಸ್ವಾಗತಿಸಿ ನಿರೂಪಿಸಿದರು. ಕಾರ್ಯದರ್ಶಿ ಜಯರಾಜ ಅತ್ತಾಜೆ ವಂದಿಸಿದರು.
ಚಿತ್ರ-ವರದಿ : ರೊನಿಡಾ ಮುಂಬಯಿ