Advertisement

ಸ್ಚ್ಛ ಮೇವ ಜಯತೇ ಜಾಗೃತಿ ರಥಕ್ಕೆ ಚಾಲನೆ

11:40 AM Sep 22, 2019 | Suhan S |

ಕೊಪ್ಪಳ: ಸರ್ಕಾರದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ನಡೆಯುವ ಸ್ವತ್ಛಮೇವ ಜಯತೇ ಜಾಗೃತಿ ರಥಕ್ಕೆ ಜಿಪಂ ಸಿಇಒ ರಘುನಂದನ್‌ ಮೂರ್ತಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

Advertisement

ಸ್ವತ್ಛತೆಯ ಜವಾಬ್ದಾರಿ ನಿಮ್ಮದು, ಬನ್ನಿ ನಮ್ಮೊಂದಿಗೆ ಕೈ ಜೋಡಿಸಿ, ಸ್ವತ್ಛತೆಯಲ್ಲಿ ಕರ್ನಾಟಕಕ್ಕೆ ಸಿಗಲಿ ಅಗ್ರ ಸ್ಥಾನ, ಎಂಬ ಧ್ಯೇಯ ವಾಕ್ಯದೊಂದಿಗೆ ಸಾರ್ವಜನಿಕರಿಗೆ ರಥ ಹಾಗೂ ಕಲಾ ತಂಡಗಳ ಮೂಲಕ ಜಾಗೃತಿ ಮೂಡಿಸಲು ರಾಜ್ಯ ಸರ್ಕಾರದಿಂದ ರಾಜ್ಯಾದ್ಯಂತ ಹಮ್ಮಿಕೊಳ್ಳಲಾದ “ಸ್ವತ್ಛಮೇವ ಜಯತೇ’ ಜಾಗೃತಿ ರಥವು ಜಿಲ್ಲೆಗೆ ಆಗಮಿಸಿದ್ದು, ಜಿಲ್ಲಾದ್ಯಂತ ನಡೆಯುವಜಾಗೃತಿ ಆಂದೋಲನಕ್ಕೆ ಶುಕ್ರವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ಚಾಲನೆ ನೀಡಲಾಯಿತು.ಜಿಪಂ ಉಪ ಕಾರ್ಯದರ್ಶಿ ಎನ್‌.ಕೆ. ತೊರವಿ, ಯೋಜನಾ ನಿರ್ದೇಶಕ ರವಿ ಬಿಸರಳ್ಳಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಆರ್‌.ಜಿ. ನಾಡಗೀರ, ತಾಪಂ ಇಒ ಟಿ. ಕೃಷ್ಣಮೂರ್ತಿ, ವಾರ್ತಾ ಇಲಾಖೆಯ ಎಂ. ಅವಿನಾಶ, ಎಂ. ಪಾಂಡುರಂಗ ಹಾಗೂ ಜಿಪಂ ಸಿಬ್ಬಂದಿ ಹನುಮೇಶ, ಮಾರುತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿ ಕಾರಿಗಳು, ಸಿಬ್ಬಂದಿ ಮತ್ತು ಕಲಾವಿದರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next