Advertisement

ಪರಿಸರ ನೈರ್ಮಲ್ಯಕ್ಕೆ ಸ್ವತ್ಛ ಭಾರತ್‌ ವರದಾನ: ಭಾರತಿ

12:46 PM Aug 30, 2018 | |

ಬಳ್ಳಾರಿ: ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ನೈರ್ಮಲ್ಯತೆಗೆ ವರದಾನವಾಗಿರುವ ಸ್ವತ್ಛ ಭಾರತ್‌ ಅಭಿಯಾನ ಯೋಜನೆಯನ್ನು ಸದ್ಬಳಕೆ ಮಾಡುವಲ್ಲಿ ನಾಗರಿಕರ ಪಾತ್ರ ಪ್ರಮುಖವಾಗಿದೆ ಎಂದು ಜಿಪಂ ಅಧ್ಯಕ್ಷೆ
ಭಾರತಿ ತಿಮ್ಮಾರೆಡ್ಡಿ ಅಭಿಪ್ರಾಯಪಟ್ಟರು.

Advertisement

ತಾಲೂಕಿನ ಬೆಳಗಲ್ಲು ಗ್ರಾಮದ ಸಮುದಾಯ ಭವನದಲ್ಲಿ ಕೇಂದ್ರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ
ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ಜಿಪಂ, ವಾರ್ತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾಪಂ, ಬೆಳಗಲ್ಲು ಗ್ರಾಪಂ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಸ್ವತ್ಛ ಭಾರತ ಕುರಿತ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಖಾನೆ ಹಾಗೂ ಪ್ಲಾಸ್ಟಿಕ್‌ ಬಳಕೆಯಿಂದಾಗಿ ಪರಿಸರ ಹಾಗೂ ವಾಯು ಮಾಲಿನ್ಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ
ಪ್ರಧಾನಿ ನರೇಂದ್ರ ಮೋದಿಯವರು ಸ್ವತ್ಛ ಭಾರತದ ಬಗ್ಗೆ ಕನಸು ಕಂಡಿದ್ದಾರೆ. ಅದನ್ನು ನನಸು ಮಾಡುವಲ್ಲಿ ಅಧಿಕಾರಿಗಳ ಜೊತೆಗೆ ಸಾರ್ವಜನಿಕರು ಸಹ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಜಿಪಂ ಉಪಾಧ್ಯಕ್ಷೆ ದೀನಾ ಮಂಜುನಾಥ್‌ ಮಾತನಾಡಿ, ಆರೋಗ್ಯವೇ ಮಹಾಭಾಗ್ಯ ಎನ್ನುವ ಗಾದೆಯಂತೆ ಎಲ್ಲರೂ ಸ್ವತ್ಛತೆಯ ಕಡೆಗೆ ಗಮನಹರಿಸಿದಲ್ಲಿ ಆರೋಗ್ಯ ಸುಧಾರಿಸುವಲ್ಲಿ ಯಶಸ್ವಿ ಕಾಣಬಹುದು. ಈ ನಿಟ್ಟಿನಲ್ಲಿ ಮಹಿಳೆಯರು ತಮ್ಮ ಮನೆಯ ಜೊತೆಗೆ ಸುತ್ತಮುತ್ತಲಿನ ಪರಿಸರ ಸ್ವತ್ಛವಾಗಿಟ್ಟುಕೊಂಡಲ್ಲಿ ಗ್ರಾಮೀಣ ಜನರ ಆರೋಗ್ಯ ಸುಧಾರಿಸಲಿದೆ ಎಂದರು.

ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯದ ಉಪನಿರ್ದೇಶಕ ಜಿ.ಡಿ.ಹಳ್ಳಿಕೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಷೇತ್ರ
ಪ್ರಚಾರ ಸಹಾಯಕ ಎನ್‌.ರಾಮಕೃಷ್ಣ ಸ್ವಾಗತಿಸಿ, ವಂದಿಸಿದರು. ಬೆಳಗಲ್ಲು ಗ್ರಾಪಂ ಅಧ್ಯಕ್ಷೆ ವಸಂತ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಅಧಿಕಾರಿ ಕೆ.ಆರ್‌.ಪ್ರಕಾಶ್‌, ತಾಪಂ ಸಹಾಯಕ ನಿರ್ದೇಶಕ ಬಸವರಾಜ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಸುಶೀಲ, ಮಹಿಳಾ ಆರೋಗ್ಯ ಸಹಾಯಕಿ ಶಾರದ, ಗ್ರಾಪಂ ಅಭಿವೃದ್ಧಿ ಅಧಿಕಾರಿ ಉದ್ದಾನಗೌಡ ಇದ್ದರು.

Advertisement

ಜಾಗೃತಿ ಜಾಥಾ: ಕಾರ್ಯಕ್ರಮದ ನಿಮಿತ್ತ ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಜಿಪಂ ಉಪಾಧ್ಯಕ್ಷೆ ದೀನಾ ಮಂಜುನಾಥ್‌
ಚಾಲನೆ ನೀಡಿದರು. ಜಾಥಾವು ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸ್ವತ್ಛತೆಯ ಬಗ್ಗೆ ಅರಿವು ಮೂಡಿಸಲಾಯಿತು. ಇದೇ ವೇಳೆ ಮಕ್ಕಳಿಗಾಗಿ ಚಿತ್ರ ಕಲಾ ಸ್ಪರ್ಧೆ, ಭಾಷಣ ಸ್ಪರ್ಧೆ ಹಾಗೂ ರಸಪ್ರಶ್ನೆ ಕಾರ್ಯಕ್ರಮ ಆಯೋಜಿಸಲಾಗಿದ್ದು,
ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next