Advertisement

Swati Maliwal ಹಲ್ಲೆ ಪ್ರಕರಣ: ಬಿಭವ್ ಕುಮಾರ್ ಗೆ ಜುಲೈ 16 ರವರೆಗೆ ನ್ಯಾಯಾಂಗ ಬಂಧನ

06:55 PM Jul 06, 2024 | Team Udayavani |

ಹೊಸದಿಲ್ಲಿ: ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಬಿಭವ್ ಕುಮಾರ್ ಅವರ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ಶನಿವಾರ ಜುಲೈ 16 ರವರೆಗೆ ವಿಸ್ತರಿಸಿದೆ.

Advertisement

ಮೇ 13 ರಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅಧಿಕೃತ ನಿವಾಸದಲ್ಲಿ ಸ್ವಾತಿ ಅವರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಿಭವ್ ಕುಮಾರ್ ಅವರನ್ನು ಬಂಧಿಸಲಾಗಿತ್ತು. ಪ್ರಕರಣ ಭಾರೀ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು.

ವೀಡಿಯೋ ಕಾನ್ಫರೆನ್ಸ್ ಮೂಲಕ ಕುಮಾರ್ ಅವರನ್ನು ಹಾಜರುಪಡಿಸಲಾಗಿದ್ದು, ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಗೌರವ್ ಗೋಯಲ್ ಅವರು ನ್ಯಾಯಾಂಗ ಬಂಧನವನ್ನು ವಿಸ್ತರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next