Advertisement

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

03:07 PM May 18, 2024 | Team Udayavani |

ನವದೆಹಲಿ: ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

Advertisement

ಸೋಮವಾರ ಕೇಜ್ರಿವಾಲ್ ಅವರ ನಿವಾಸಕ್ಕೆ ಭೇಟಿ ನೀಡಿದಾಗ ದೆಹಲಿ ಮುಖ್ಯಮಂತ್ರಿಯ ಕಾರ್ಯದರ್ಶಿ ಬಿಭವ್ ಕುಮಾರ್ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸ್ವಾತಿ ಮಲಿವಾಲ್ ತಮ್ಮ ಎಫ್‌ಐಆರ್‌ನಲ್ಲಿ ಆರೋಪಿಸಿದ್ದಾರೆ.

ದೆಹಲಿ ಪೊಲೀಸ್ ತಂಡವು ಮಧ್ಯಾಹ್ನದ ಸುಮಾರಿಗೆ ಮುಖ್ಯಮಂತ್ರಿಯವರ ನಿವಾಸದಿಂದ ಕುಮಾರ್ ಅವರನ್ನು ಕರೆತಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರನ್ನು ವಿಚಾರಣೆಗಾಗಿ ಠಾಣೆಗೆ ಕರೆದೊಯ್ಯಲಾಗಿದೆ

ಸಂಪೂರ್ಣ ಸಹಕಾರದ ಭರವಸೆ ನೀಡಿ ಅಧಿಕಾರಿಗಳಿಗೆ ಇಮೇಲ್ ಕಳುಹಿಸಿದ್ದರೂ ಪೊಲೀಸರಿಂದ ಇನ್ನೂ ಯಾವುದೇ ಮಾಹಿತಿ ಬಂದಿಲ್ಲ ಎಂದು ಅವರ ವಕೀಲರು ತಿಳಿಸಿದ್ದಾರೆ.

“ನಾವು ಇನ್ನೂ ಪೊಲೀಸರಿಂದ ಯಾವುದೇ ಮಾಹಿತಿಯನ್ನು ಸ್ವೀಕರಿಸಿಲ್ಲ. ನಾವು ತನಿಖೆಯಲ್ಲಿ ಸಹಕರಿಸುತ್ತೇವೆ ಎಂದು ಅವರಿಗೆ ಇ-ಮೇಲ್ ಕಳುಹಿಸಿದ್ದೇವೆ” ಎಂದು ಬಿಭವ್ ಕುಮಾರ್ ಅವರ ವಕೀಲ ಕರಣ್ ಶರ್ಮಾ ಸುದ್ದಿ ಸಂಸ್ಥೆ ಎಎನ್ಐ ಗೆ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next