Advertisement

CET ದಿನ ಪ್ರಮಾಣವಚನ: ಸಿದ್ದರಾಮಯ್ಯಗೆ ಬಿ.ಎಲ್.ಸಂತೋಷ್ ತಿರುಗೇಟು

04:31 PM May 19, 2023 | Team Udayavani |

ಬೆಂಗಳೂರು: ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಟ್ವೀಟ್ ಮೂಲಕ ಶನಿವಾರ ನಡೆಯಲಿರುವ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಕಾರ್ಯಕ್ರಮಕ್ಕೆ ತಿರುಗೇಟು ನೀಡಿದ್ದಾರೆ.

Advertisement

”ನಮ್ಮ ನಿಯೋಜಿತ ಸಿಎಂ ಈ ಟ್ವೀಟ್ ಮಾಡಿ ಹಲವು ದಿನಗಳು ಕಳೆದಿಲ್ಲ.ನಾಳೆ ರಾಜ್ಯ ಮತ್ತು ಬೆಂಗಳೂರಿನಾದ್ಯಂತ ಸಿಇಟಿ ಪರೀಕ್ಷೆಗಳು. ನಿಮ್ಮ ಪ್ರಮಾಣ ವಚನ ಸ್ವೀಕಾರವನ್ನು ಒಂದೆರೆಡು ದಿನ ಮುಂದೂಡಿದ್ದರೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರಲಿಲ್ಲ.” ಎಂದು ಸಂತೋಷ್ ಅವರು ಟ್ವೀಟ್ ಮಾಡಿದ್ದಾರೆ.

”ನೀಟ್ ಪರೀಕ್ಷಾರ್ಥಿಗಳು ಮತ್ತು ಬೆಂಗಳೂರಿನ ಜನರ ವಿರೋಧವನ್ನು ಧಿಕ್ಕರಿಸಿ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಬೆಂಗಳೂರಿನಲ್ಲಿ ನಡೆಸಲಿರುವ ರೋಡ್ ಶೋ ಅತ್ಯಂತ ಬೇಜವಾಬ್ದಾರಿತನದ ನಡೆ. ಮೋದಿ ಅವರು ಪ್ರಚಾರ ಮಾಡಲಿ ನಮ್ಮ ತಕರಾರು ಇಲ್ಲ. ಆದರೆ ವಿದ್ಯಾರ್ಥಿಗಳಿಗೆ ಆಗುವ ತೊಂದರೆಗೆ ಯಾರು ಹೊಣೆ?” ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next