Advertisement

ವ್ಯವಸ್ಥೆ ವಿಫಲವಾಗಿದೆ, ಈಗ ‘ಜನ್ ಕಿ ಬಾತ್’ ಮುಖ್ಯ : ರಾಹುಲ್ ಗಾಂಧಿ

03:10 PM Apr 25, 2021 | Team Udayavani |

ನವ ದೆಹಲಿ : ಕೋವಿಡ್ ನಿಯಂತ್ರಿಸುವಲ್ಲಿ “ವ್ಯವಸ್ಥೆ ವಿಫಲವಾಗಿದೆ” ಎಂದು ರಾಹುಲ್ ಗಾಂಧಿ ಮತ್ತೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Advertisement

ಕೋವಿಡ್ -19 ಪ್ರಕರಣಗಳಲ್ಲಿ ಹಠಾತ್ ಏರಿಕೆಯಿಂದಾಗಿ ಕಷ್ಟದಲ್ಲಿರುವ ದೇಶದ ನಾಗರಿಕರಿಗೆ ಸಹಾಯ ನೀಡುವುದು ಪಕ್ಷದ ಕರ್ತವ್ಯವಾಗಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಮಂತ್ರಿಯವರ ಮಾಸಿಕ ರೇಡಿಯೋ ಸಂವಾದ ಕಾರ್ಯಕ್ರಮ ಮನ್ ಕಿ ಬಾತ್ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ ಬೆನ್ನಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಹೇಳಿಕೆಯನ್ನು ನೀಡಿದ್ದಾರೆ.

ಓದಿ : ಮನ್ ಕಿ ಬಾತ್ : ಕೋವಿಡ್ ಹೋರಾಟದಲ್ಲಿ ರಾಜ್ಯಗಳ ಪರ ಕೇಂದ್ರ ಸರ್ಕಾರ ನಿಂತಿದೆ : ಮೋದಿ

ಕೋವಿಡ್ ಸೊಂಕಿನಿಂದ ದೇಶ ತತ್ತರಿಸಿ ಹೋಗಿದೆ. ಜನ ಪರದಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಗಾಂಧಿ ಆರೋಪಿಸಿದ್ದಾರೆ.

Advertisement

ಈ ಕುರಿತಾಗಿ ತಮ್ಮ ಅಧಿಕೃತ ಟ್ವೀಟರ್ ನಲ್ಲಿ ಟ್ವೀಟ್ ಮಾಡಿದ ಗಾಂಧಿ, “ವ್ಯವಸ್ಥೆ ವಿಫಲವಾಗಿದೆ, ಆದ್ದರಿಂದ ಜನ್ ಕಿ ಬಾತ್ ಮಾಡುವುದು ಮುಖ್ಯ” ಎಂದು ಅವರು ಪರೋಕ್ಷವಾಗಿ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿಯವರನ್ನು ಕುಟುಕಿದ್ದಾರೆ.


ಇನ್ನು, ಈ ಬಿಕ್ಕಟ್ಟಿನಲ್ಲಿ ದೇಶಕ್ಕೆ ಜವಾಬ್ದಾರಿಯುತ ನಾಗರಿಕರ ಅಗತ್ಯವಿದೆ. ನನ್ನ ಕಾಂಗ್ರೆಸ್ ಸಹೋದ್ಯೋಗಿಗಳಿಗೆ ಎಲ್ಲಾ ರಾಜಕೀಯ ಕಾರ್ಯಕ್ರಮಗಳನ್ನು ಕೈ ಬಿಡುವಂತೆ ನಾನು ವಿನಂತಿಸುತ್ತೇನೆ. ಕೋವಿಡ್ ಪರಿಸ್ಥಿತಿಯಿಂದಾಗಿ ಕಷ್ಟದಲ್ಲಿರುವವರಿಗೆ ಎಲ್ಲರೂ ಸಹಾಯವನ್ನು ನೀಡಿ ಮತ್ತು ನಮ್ಮ ದೇಶದ ಜನರ ನೋವನ್ನು ಕಡಿಮೆ ಮಾಡಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಓದಿ : ಮಿತಿ ಮೀರುತ್ತಿದೆ ಸೋಂಕು: ದೇಶದಲ್ಲಿ 24 ಗಂಟೆಯಲ್ಲಿ 3.49 ಲಕ್ಷ ಸೋಂಕಿತರು ಪತ್ತೆ

Advertisement

Udayavani is now on Telegram. Click here to join our channel and stay updated with the latest news.

Next