ಮೈಸೂರು: ಅಧಿಕಾರಕ್ಕಾಗಿ ಹಪಹಪಿಸುತ್ತಿರುವ ಮಂದಿ ಸರ್ಕಾರ ಉರುಳಿಸಲು ವ್ಯವಸ್ಥಿತ ಪಿತೂರಿ ನಡೆಸುತ್ತಿದ್ದಾರೆ ಎಂದು ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ದೂರಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಷಯಾಧಾರಿತ ಚರ್ಚೆ ಮಾಡುವ ಬದಲಿಗೆ ಇಲ್ಲಸಲ್ಲದ್ದನ್ನು ಹೇಳುತ್ತಾ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಚುನಾವಣೆ ಸೇರಿದಂತೆ ಯಾವುದೇ ಸಂದರ್ಭ ದಲ್ಲಾದರೂ ವಿಷಯಾಧಾರಿತ ಚರ್ಚೆ ಮಾಡಬೇಕು.
ಆದರೆ, ಜಾತಿ, ಧರ್ಮದ ಹೆಸರಿನಲ್ಲಿ ಜನರನ್ನು ಎತ್ತಿಕಟ್ಟುವ ಕೆಲಸ ಮಾಡಲಾಗುತ್ತಿದೆ. ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ರಾಜ್ಯಸರ್ಕಾರದಿಂದ ಅಧಿಕಾರ ಕಸಿದುಕೊಳ್ಳಲು ಕೆಲವರು ಹಗಲುಗನಸು ಕಾಣುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಒಂದೇ ಒಂದು ಸಣ್ಣ ಕಪ್ಪು$ಚುಕ್ಕೆ ಇಲ್ಲ. ಹೀಗಾಗಿ ಪೂರ್ಣಾವಧಿ ಅಧಿಕಾರ ಪೂರೈಸುವ ಜತೆಗೆ, 2018ರ ಚುನಾವಣೆಯಲ್ಲೂ ಪಕ್ಷವನ್ನು ಅಧಿಕಾರಕ್ಕೆ ತಂದು ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಸಚಿವ ಸಂಪುಟದಿಂದ ಕೆಲವು ಹಿರಿಯ ಸಚಿವರನ್ನು ಕೈಬಿಟ್ಟು ಪಕ್ಷ ಸಂಘಟನೆ ಹೊಣೆಗಾರಿಕೆ ನೀಡಲಾಗುತ್ತದೆ ಎಂಬ ವಿಚಾರಕ್ಕೆ ಅತ್ಯಂತ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಸಚಿವ ಮಹದೇವಪ್ಪ, ಮುಂಬರುವ ವಿಧಾನಸಬೆ ಚುನಾವಣೆ ದೃಷ್ಟಿಯಿಂದ ಪಕ್ಷ ನೀಡುವ ಯಾವುದೇ ಜವಾಬ್ದಾರಿ ಹೊರಲು ಸಿದ್ಧನಿದ್ದೇನೆ ಎಂದು ತಿಳಿಸಿದರು. ಗೋವಿಂದರಾಜು ಡೈರಿಯಲ್ಲಿರುವ ಇನ್ಸಿ¿ಲ್‌ಗಳ ಬಗ್ಗೆ ಅವರವರ ಬಾವನೆ, ವಿವೇಚನೆಗೆ ಬಿಟ್ಟಿದ್ದು. ಅಂತ ದಕ್ಕೆಲ್ಲಾ ನಾನು ಉತ್ತರ, ಸ್ಪಷ್ಟನೆ ಕೊಡಲಾಗುವುದಿಲ್ಲ.
ವಿಧಾನಪರಿಷತ್ ಸದಸ್ಯ ಗೋವಿಂದರಾಜು ಅವರಿಗೆ ಸೇರಿದ್ದೆನ್ನಲಾದ ಡೈರಿಯಲ್ಲಿ ಹಲವು ಸಚಿವರು ಕಾಂಗ್ರೆಸ್ ಹೈಕಮಾಂಡ್‌ಗೆ ಕೋಟ್ಯಾಂತರ ರೂ. ಕಪ್ಪ ಸಲ್ಲಿಸಿರುವ ಬಗ್ಗೆ ಉಲ್ಲೇಖವಾಗಿರುವ ವಿಚಾರ ತನಗೇನೂ ಗೊತ್ತಿಲ್ಲ. ಗೋವಿಂದರಾಜು ಅವರೇ ಆ ಡೈರಿ ನನ್ನದಲ್ಲ. ಅದರಲ್ಲಿರುವ ಹಸ್ತಾಕ್ಷರವು ತನ್ನದಲ್ಲ ಎಂದು ಹೇಳಿದ್ದಾರೆ. ಹೀಗಿರುವಾಗ ಕೇವಲ ರಾಜಕೀಯ ಕಾರಣಕ್ಕಾಗಿ ಈ ವಿಷಯವನ್ನು ದೊಡ್ಡದು ಮಾಡಲಾಗುತ್ತಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.
ರಾಜ್ಯ ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಮತ, ಭಿನ್ನಾಭಿಪ್ರಾಯವಿಲ್ಲ. ಎಲ್ಲಾ ನಾಯಕರು ಒಗ್ಗಟ್ಟಾಗಿದ್ದೇವೆ. ಒಟ್ಟಿಗೆ ಇದ್ದು ಮುಂಬರುವ ಚುನಾವಣೆ ಎದುರಿಸುತ್ತೇವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ನಡುವೆ ವೈಮನಸ್ಸುಂಟಾಗಿದೆ ಎಂಬುದು ಸತ್ಯಕ್ಕೆ ದೂರವಾದದ್ದು.
-ಡಾ.ಎಚ್.ಸಿ.ಮಹದೇವಪ್ಪ, ಸಚಿವ