ದುಬೈ: ಈ ವರ್ಷದ ಜೂನ್ನಲ್ಲಿ ನಡೆಯಲ್ಲಿರುವ ICC ಟಿ-20 ವಿಶ್ವಕಪ್ಗೆ ದಿನಗಣನೆ ಆರಂಭವಾಗಿದೆ. ಈ ಬಾರಿಯ ಚುಟುಕು ಕ್ರಿಕೆಟ್ ಸಮರಕ್ಕೆ ಅಮೇರಿಕಾ ಹಾಗೂ ವೆಸ್ಟ್ ಇಂಡೀಸ್ ಜಂಟಿಯಾಗಿ ಆತಿಥ್ಯ ವಹಿಸುತ್ತಿವೆ. ಈ ಮಧ್ಯೆ ಐಸಿಸಿ, ಟಿ-20 ವಿಶ್ವಕಪ್ನ ವೇಳಾಪಟ್ಟಿಯನ್ನು ಇಂದು ಬಿಡುಗಡೆಗೊಳಿಸಿದೆ.
ವೇಳಾಪಟ್ಟಿಯ ಪ್ರಕಾರ ಜೂನ್ 1 ರಿಂದ ಆರಂಭವಾಗಲಿರುವ ಟೂರ್ನಿ ಜೂನ್ 29 ರಂದು ಮುಕ್ತಾಯವಾಗಲಿದೆ. ಟಿ-20 ವಿಶ್ವಕಪ್ನ ಫೈನಲ್ ಪಂದ್ಯ ಜೂನ್ 29 ರಂದು ನಡೆಯಲ್ಲಿದೆ. ಉದ್ಘಾಟನಾ ಪಂದ್ಯ ಅತಿಥೇಯ ಯುಎಸ್ಎ ಹಾಗೂ ಕೆನಡಾ ನಡುವೆ ನಡೆದರೆ, ಬಹುನಿರೀಕ್ಷಿತ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ಜೂನ್ 9 ರಂದು (ಭಾನುವಾರ) ನ್ಯೂಯಾರ್ಕ್‌ನಲ್ಲಿ ನಡೆಯಲ್ಲಿದೆ.
ಭಾರತ ತನ್ನ ಮೊದಲ ಪಂದ್ಯವನ್ನು ಜೂನ್ 12 ರಂದು ಅಮೇರಿಕದ ವಿರುದ್ಧ ಆಡಲಿದ್ದು, ಜೂನ್ 15 ರಂದು ಭಾರತ ಕೆನಡಾ ವಿರುದ್ಧ ಸೆಣಸಲಿದೆ. ಭಾರತ ತನ್ನೆಲ್ಲಾ ಲೀಗ್ ಪಂದ್ಯಗಳನ್ನು ಅಮೇರಿಕದಲ್ಲೇ ಆಡಲಿದ್ದು, ಮೂರು ನ್ಯೂಯಾರ್ಕ್ ಮತ್ತು ಒಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ. ಈಗಾಗಲೇ ಈ ವಿಶ್ವಕಪ್ ಕ್ರಿಕೆಟ್‌ಗೆ 20 ತಂಡಗಳನ್ನು ಅಧಿಕೃತಗೊಳಿಸಲಾಗಿದೆ.
ಇದನ್ನೂ ಓದಿ: Ranchi; 15 ಕೋಟಿ ರೂ ವಂಚನೆ; ಮಾಜಿ ಪಾರ್ಟ್ನರ್ ಗಳ ವಿರುದ್ಧ ಕೇಸು ದಾಖಲಿಸಿದ ಧೋನಿ