Advertisement

ತಿ.ನರಸೀಪುರ: ಚಿರತೆ ದಾಳಿಗೆ ಮತ್ತೊಂದು ಬಲಿ, ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

08:24 PM Dec 01, 2022 | Team Udayavani |

ತಿ.ನರಸೀಪುರ: ತಿಂಗಳ ಹಿಂದೆಯಷ್ಟೇ ಚಿರತೆ ದಾಳಿಯಿಂದ ಎಂ.ಎಲ್.ಹುಂಡಿಯ ಯುವಕನೊಬ್ಬ ಬಲಿಯಾದ ನೆನಪು ಮಾಸುವ ಮುನ್ನವೇ ಚಿರತೆ ಮತ್ತೊಂದು ಬಲಿಯನ್ನು ಪಡೆದಿದೆ.

Advertisement

ತಾಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದ ಮೇಘನಾ (22) ಚಿರತೆ ದಾಳಿಗೆ ಬಲಿಯಾದ ಯುವತಿ. ಹಿತ್ತಲಿಗೆ ಹೋಗಿದ್ದ ಸಮಯದಲ್ಲಿ ಚಿರತೆ ದಾಳಿ ನಡೆಸಿದೆ ಎಂದು ಹೇಳಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗಾಗಿ ಯುವತಿಯನ್ನು ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತಪಟ್ಟಿದ್ದಾಳೆ.

ಚಿರತೆ ಹಿಡಿಯುವಂತೆ ಸಾರ್ವಜನಿಕರು ಹಲವು ಭಾರಿ ಮನವಿ ಮಾಡಿದರೂ ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಈಗ ಮತ್ತೊಂದು ಬಡ ಜೀವ ಜೀವ ಕಳೆದುಕೊಂಡಂತಾಗಿದೆ .

ಸಾರ್ವಜನಿಕರ ಆಕ್ರೋಶ:

ಕಳೆದ ತಿಂಗಳಷ್ಟೇ ಚಿರತೆ ದಾಳಿಯಿಂದ ಯುವಕ ಸಾವನ್ನಪ್ಪಿದ್ದು ,ಈಗ ಯುವತಿಯನ್ನು ಬಲಿ ಪಡೆದಿದೆ. ನಿರಂತರವಾಗಿ ಚಿರತೆ ದಾಳಿ ಮಾಡುತ್ತಿದ್ದರೂ ಚಿರತೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಮತ್ತು ತಾಲೂಕು ಆಡಳಿತ ವಿಫಲತೆ ಕಂಡಿದೆ ಎಂದು ಆಕ್ರೋಶಗೊಂಡ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

Advertisement

ಸ್ಥಳಕ್ಕೆ ಭೇಟಿ ನೀಡಿದ ಶಾಸಕರು,ದುರ್ಘಟನೆಗೆ ಸಂತಾಪ ಸೂಚಿಸಿದರು.ಸ್ಥಳದಲ್ಲೇ ಪ್ರತಿಭಟನಾ ನಿರತ ಜೊತೆ ಧರಣಿಗೆ ಕೂತ ಶಾಸಕರು ಸ್ಥಳಕ್ಕೆ ಜಿಲ್ಲಾಧಿಕಾರಿಗಳು,ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡಬೇಕು ಎಂದು ಪಟ್ಟುಹಿಡಿದರು .ಸ್ಥಳದಲ್ಲಿ ಡಿವೈಎಸ್ಪಿ ಗೋವಿಂದರಾಜು ,ಪಿಎಸ್ಐ ತಿರುಮಲ್ಲೇಶ್,ಡಾ .ಭಾರತಿ ,ಡಾ .ರೇವಣ್ಣ ಇತರರು ಹಾಜರಿದ್ದರು .

ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ 20 ಯೋಜನೆ ಕೆಲಸ ಶೀಘ್ರ ಪುನಾರಂಭ: ತಾಲಿಬಾನ್‌

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next