Advertisement

ಐರ್ಲೆಂಡ್‌ ವಿರುದ್ಧದ ಟಿ20 ಸರಣಿ; ಹಾರ್ದಿಕ್‌, ಗಿಲ್‌ಗೆ ವಿಶ್ರಾಂತಿ ಸಾಧ್ಯತೆ

11:20 PM Jul 20, 2023 | Team Udayavani |

ಹೊಸದಿಲ್ಲಿ: ಮುಂಬರುವ ದಿನಗಳಲ್ಲಿ ತವರಿನಲ್ಲಿ ಏಷ್ಯಾ ಕಪ್‌ ಮತ್ತು ವಿಶ್ವಕಪ್‌ ಕೂಟ ನಡೆಯಲಿರುವ ಕಾರಣ ಭಾರತದ ಟಿ20 ನಾಯಕ ಹಾರ್ದಿಕ್‌ ಪಾಂಡ್ಯ ಅವರಿಗೆ ಆ. 18ರಿಂದ ಆರಂಭವಾಗುವ ಐರ್ಲೆಂಡ್‌ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ.

Advertisement

ಮೂರು ಮಾದರಿಯ ಕ್ರಿಕೆಟ್‌ಗೆ ನೇರ ಆಯ್ಕೆಯಾಗುತ್ತಿರುವ ಶುಭ್‌ಮನ್‌ ಗಿಲ್‌ ಅವರಿಗೂ ಈ ಟಿ20 ಸರಣಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಹೆಚ್ಚಾಗಿದೆ. 29ರ ಹರೆಯದ ಪಾಂಡ್ಯ ಏಕದಿನ ತಡದ ಪ್ರಮುಖ ಆಟಗಾರರಲ್ಲಿ ಒಬ್ಬರಾಗಿದ್ದಾರೆ. ಅವರು ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಗಮನಾರ್ಹ ನಿರ್ವಹಣೆ ನೀಡುತ್ತಿರುವ ಕಾರಣ ಅವರನ್ನು ಎಚ್ಚರಿಕೆಯಿಂದ ನೋಡಿಕೊಳ್ಳುವುದು ಅತ್ಯಗತ್ಯವಾಗಿದೆ. ಆದರೆ ಸದ್ಯ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ. ವೆಸ್ಟ್‌ಇಂಡೀಸ್‌ ವಿರುದ್ಧದ ಏಕದಿನ ಮತ್ತು ಟಿ20ಯಲ್ಲಿ ಅವರ ನಿರ್ವಹಣೆಯ ಆಧಾರದಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿದುಬಂದಿದೆ. ವೆಸ್ಟ್‌ಇಂಡೀಸ್‌ ವಿರುದ್ಧ ಭಾರತ ಮೂರು ಏಕದಿನ ಮತ್ತು ಐದು ಟಿ20 ಪಂದ್ಯಗಳನ್ನಾಡಲಿದೆ.

Advertisement

Udayavani is now on Telegram. Click here to join our channel and stay updated with the latest news.

Next