Advertisement

CHAMPIONS! ತಡರಾತ್ರಿ ಟೀಮ್ ಇಂಡಿಯಾಕ್ಕೆ ಅಭಿನಂದನೆ ಸಲ್ಲಿಸಿದ ಮೋದಿ

11:57 PM Jun 29, 2024 | Team Udayavani |

ಹೊಸದಿಲ್ಲಿ: ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಫೈನಲ್ ಪಂದ್ಯದಲ್ಲಿ ಗೆಲುವು ಸಾಧಿಸಿ ಟಿ 20 ವಿಶ್ವಕಪ್ ಜಯಿಸಿದ ಟೀಮ್ ಇಂಡಿಯಾಕ್ಕೆ ಪ್ರಧಾನಿ ನರೇಂದ್ರ ಮೋದಿ(PM Modi) ಅವರು ಶನಿವಾರ ರಾತ್ರಿ 11.40 ರ ವೇಳೆಗೆ ಲೈವ್ ಬಂದು ಅಭಿನಂದನೆ ಸಲ್ಲಿಸಿದ್ದಾರೆ.

Advertisement

ಈ ಗೆಲುವಿನಿಂದ ಭಾರತದ ಗಲ್ಲಿ ಗಲ್ಲಿಗಳಲ್ಲಿ 140 ಕೋಟಿ ಭಾರತೀಯರು ಸಂಭ್ರಮಿಸುತ್ತಿದ್ದಾರೆ. ಸರಣಿಯಲ್ಲಿ ಒಂದೂ ಪಂದ್ಯ ಸೋಲದೆ ಪ್ರಶಸ್ತಿ ಗೆದ್ದಿರುವುದು ಸಣ್ಣ ಸಾಧನೆಯಲ್ಲ. ನಾನು ತಂಡದ ಪ್ರತಿಯೊಬ್ಬ ಆಟಗಾರ ಮತ್ತು ಸದಸ್ಯರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಪ್ರಧಾನಿ ಹೇಳಿದರು.

ಫೈನಲ್ ಪಂದ್ಯದಲ್ಲಿ ಒಂದು ಹಂತದಲ್ಲಿ ಸೋಲಿನ ಸುಳಿಗೆ ಸಿಲುಕಿದ್ದ ಭಾರತ ತಂಡ ಕೊನೆಯ ಹಂತದಲ್ಲಿ ಅಮೋಘ ಆಟವಾಡಿ ಗೆಲುವು ತನ್ನದಾಗಿಸಿಕೊಂಡಿತು.

Advertisement

Udayavani is now on Telegram. Click here to join our channel and stay updated with the latest news.

Next