Advertisement

T20 World Cup: ಇಂದು ಭಾರತ ತಂಡ ಪ್ರಕಟ?

12:31 AM Apr 30, 2024 | Team Udayavani |

ಮುಂಬಯಿ: ಬಹುನಿರೀಕ್ಷಿತ ಟಿ20 ವಿಶ್ವಕಪ್‌ಗೆ ಮಂಗಳವಾರ ಭಾರತೀಯ ತಂಡ ಪ್ರಕಟಗೊಳ್ಳುವ ಸಾಧ್ಯತೆಯಿದೆ. ಟಿ20 ವಿಶ್ವಕಪ್‌ಗಾಗಿ ತಂಡ ಪ್ರಕಟಿಸಲು ಮೇ 1 (ಬುಧವಾರ) ಕೊನೆಯ ದಿನವಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ತಂಡ ಪ್ರಕಟಿಸಲು ಬಿಸಿಸಿಐ ಯೋಚಿಸಿದೆ ಎನ್ನಲಾಗಿದೆ. ತಂಡದ ಆಯ್ಕೆ ಸಭೆಯಲ್ಲಿ ಅಧ್ಯಕ್ಷ ಅಜಿತ್‌ ಅಗರ್ಕರ್‌ ಮತ್ತು ಕೋಚ್‌ ರಾಹುಲ್‌ ದ್ರಾವಿಡ್‌ ಭಾಗವಹಿಸಲಿದ್ದಾರೆ. ಆದರೆ ಐಪಿಎಲ್‌ ಪಂದ್ಯದ ಕಾರಣ ನಾಯಕ ರೋಹಿತ್‌ ಶರ್ಮ ಪಾಲ್ಗೊಳ್ಳುವ ಸಾಧ್ಯತೆ ಇಲ್ಲ.

Advertisement
Advertisement

Udayavani is now on Telegram. Click here to join our channel and stay updated with the latest news.

Next