Advertisement

ICC Women’s T20 World Cup ಪರಿಷ್ಕೃತ ವೇಳಾಪಟ್ಟಿ: ಅ. 6 ರಂದು ಭಾರತ-ಪಾಕಿಸ್ಥಾನ ಪಂದ್ಯ

12:57 AM Aug 27, 2024 | Team Udayavani |

ದುಬಾೖ: ಮುಂಬರುವ ವನಿತಾ ಟಿ20 ವಿಶ್ವಕಪ್‌ ಕ್ರಿಕೆಟ್‌ ಕೂಟದ ಪರಿಷ್ಕೃತ ವೇಳಾಪಟ್ಟಿಯನ್ನು ಸೋಮವಾರ ಅಂತಾ ರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ ಬಿಡುಗಡೆ ಮಾಡಿದೆ. ಇದರಂತೆ ಭಾರತ ತಂಡವು ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ಥಾನವನ್ನು ಅ. 6ರಂದು ಎದುರಿಸಲಿದೆ.

Advertisement

ಈ ಕೂಟವು ಅ. 3ರಂದು ಆರಂಭವಾಗ ಲಿದೆ. ಜಾಗತಿಕ ಮಟ್ಟದ ಈ ಕೂಟವು ಈ ಹಿಂದೆ ನಿರ್ಧರಿಸಿದಂತೆ ಬಾಂಗ್ಲಾದೇಶದಲ್ಲಿ ನಡೆಯಬೇಕಿತ್ತು. ಆದರೆ ರಾಜಕೀಯ ಅಶಾಂತಿಯ ಹಿನ್ನೆಲೆಯಲ್ಲಿ ಸುರಕ್ಷತೆಯ ದೃಷ್ಟಿಯಿಂದ ಹಲವು ಆಟಗಾರರು ಕಳವಳ ವ್ಯಕ್ತಪಡಿಸಿದ್ದರಿಂದ ಬಾಂಗ್ಲಾದಿಂದ ಬೇರೆ ಕಡೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ. ದುಬಾೖ ಮತ್ತು ಶಾರ್ಜಾದಲ್ಲಿ ಒಟ್ಟಾರೆ 23 ಪಂದ್ಯಗಳು ನಡೆಯಲಿವೆ.

ಆಟವಾಡುವ ತಂಡಗಳ ಬಣದಲ್ಲಿ ಯಾವುದೇ ಬದಲಾವಣೆ ಇಲ್ಲ. ಹಾಲಿ ಚಾಂಪಿಯನ್‌ ಆಸ್ಟ್ರೇಲಿಯ ತಂಡವು ಭಾರತ, ನ್ಯೂಜಿಲ್ಯಾಂಡ್‌, ಪಾಕಿಸ್ಥಾನ ಮತ್ತು ಶ್ರೀಲಂಕಾ ಜತೆ “ಎ’ ಬಣದಲ್ಲಿದ್ದರೆ “ಬಿ’ ಬಣದಲ್ಲಿ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್‌, ವೆಸ್ಟ್‌ಇಂಡೀಸ್‌, ಬಾಂಗ್ಲಾದೇಶ ಮತ್ತು ಸ್ಕಾಟ್ಲೆಂಡ್‌ ಇವೆ. ಪ್ರತಿಯೊಂದು ತಂಡವು ಬಣ ಹಂತದಲ್ಲಿ ನಾಲ್ಕು ಪಂದ್ಯಗಳನ್ನಾಡಲಿದ್ದು ಅಗ್ರ ಎರಡು ತಂಡಗಳು ಸೆಮಿಫೈನಲಿಗೇರಲಿವೆ. ಸೆಮಿಫೈನಲ್ಸ್‌ ಅ. 17 ಮತ್ತು 18ರಂದು ನಡೆಯಲಿದ್ದರೆ ದುಬಾೖಯಲ್ಲಿ ಅ. 20ರಂದು ಫೈನಲ್‌ ಜರಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next