Advertisement

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

07:56 AM Jun 30, 2024 | Team Udayavani |

ಬಾರ್ಬಡೋಸ್: ಅಸಂಖ್ಯ ಭಾರತೀಯ ಅಭಿಮಾನಿಗಳಿಗೆ ಟಿ20 ವಿಶ್ವಕಪ್ ಗೆಲುವಿನ ಔತಣ ಉಣಬಡಿಸಿದ ನಾಯಕ ರೋಹಿತ್ ಶರ್ಮಾ, ಮಾಜಿ ನಾಯಕ ವಿರಾಟ್ ಕೊಹ್ಲಿ ಕೊನೆಗೊಂದು ಬೇಸರ ಮೂಡಿಸಿದ್ದಾರೆ. ಟಿ20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಈ ಇಬ್ಬರು ದಿಗ್ಗಜರು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ.

Advertisement

ಪಂದ್ಯ ಮುಗಿದ ಬಳಿಕ ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸುವ ವೇಳೆ ವಿರಾಟ್ ಕೊಹ್ಲಿ ತಮ್ಮ ನಿವೃತ್ತಿಯ ಬಗ್ಗೆ ಖಚಿತಪಡಿಸಿದರು. ನಾಯಕ ರೋಹಿತ್ ಶರ್ಮಾ ಅವರೂ ಬಳಿಕ ತನ್ನ ಟಿ20 ನಿವೃತ್ತಿಯನ್ನು ಘೋಷಿಸಿದರು.

ಇದು ನನ್ನ ಕೊನೆಯ ಟಿ20 ವಿಶ್ವಕಪ್. ಇದು ಭಾರತದ ಪರ ನನ್ನ ಟಿ20 ಪಂದ್ಯ. ಮುಂದಿನ ತಲೆಮಾರು ಜವಾಬ್ದಾರಿ ಹೊತ್ತು ಕೊಳ್ಳಲು ಇದು ಸಕಾಲ ಎಂದು ಕೊಹ್ಲಿ ಪಂದ್ಯದ ಬಳಿಕ ಹೇಳಿದ್ದಾರೆ.

ಫೈನಲ್ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೋಹಿತ್ ಶರ್ಮಾ, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯವೂ ಹೌದು. ಈ ಫಾರ್ಮ್ಯಾಟ್ ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಫಾರ್ಮ್ಯಾಟ್ ನೊಂದಿಗೆ ನನ್ನ ವೃತ್ತಿ ಜೀವನ ಆರಂಭಿಸಿದ್ದೆ. ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ” ಎಂದು ಹೇಳಿದರು.

Advertisement

ಶನಿವಾರದ ಪಂದ್ಯದಲ್ಲಿ 59 ಎಸೆತಗಳಲ್ಲಿ 6 ಬೌಂಡರಿ, 2 ಸಿಕ್ಸರ್‌ ಸಹಿತ 76 ರನ್‌ ಸಿಡಿಸಿದ ಕೊಹ್ಲಿ, ತಂಡದ ಮೊತ್ತ ಹೆಚ್ಚಿಸುವಲ್ಲಿ ಗಣನೀಯ ಕೊಡುಗೆ ನೀಡಿದ್ದರು. 35 ವರ್ಷದ ಕೊಹ್ಲಿ 125 ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ 4188 ರನ್‌ ಬಾರಿಸಿದ್ದಾರೆ. ಇದರಲ್ಲಿ 1 ಶತಕ, 38 ಅರ್ಧ ಶತಕಗಳು ಸೇರಿವೆ.

ಟಿ20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್‌, 4231 ರನ್‌ ಗಳಿಸಿದ್ದು, ಇದರಲ್ಲಿ 5 ಶತಕ ಹಾಗೂ 37 ಅರ್ಧಶತಕಗಳು ಸೇರಿವೆ.

Advertisement

Udayavani is now on Telegram. Click here to join our channel and stay updated with the latest news.

Next