Advertisement
“ವಿಶ್ವಕಪ್ ಗೆದ್ದ ತಂಡಕ್ಕೆ ಅಭಿನಂದನೆಗಳು. ಟೀಮ್ ಇಂಡಿಯಾ, ನೀವು ಜಮ್ಮು ಕಾಶ್ಮೀರಕ್ಕೆ ಬನ್ನಿ… ಸಂಭ್ರಮವನ್ನು ಹೆಚ್ಚಿಸಿಕೊಳ್ಳಿ. ನಿಮ್ಮನ್ನು ಆಹ್ವಾನಿಸಲು ನಮಗೆ ಹೆಮ್ಮೆಯಾಗುತ್ತಿದೆ’ ಎಂದು ಪ್ರವಾಸೋದ್ಯಮ ಇಲಾಖೆ ಹೇಳಿದೆ.
ಸೋಮವಾರ ನಡೆದ ಲೋಕಸಭೆ ಅಧಿವೇಶನದಲ್ಲಿ ವಿಶ್ವಕಪ್ ಗೆದ್ದ ಭಾರತ ಕ್ರಿಕೆಟ್ ತಂಡದ ಆಟಗಾರರಿಗೆ ಅಭಿನಂದನೆ ಸಲ್ಲಿಸಲಾಗಿದೆ. ಸ್ಪೀಕರ್ ಓಂ ಬಿರ್ಲಾ ಮಾತನಾಡಿ, “ದೇಶದ ಯುವಕರು ಹಾಗೂ ಕ್ರಿಕೆಟಿಗರು ದೇಶಕ್ಕೆ ಹೆಮ್ಮೆ ತಂದಿದ್ದಾರೆ. ಭಾರತ ತಂಡವನ್ನು ಮುನ್ನಡೆಸಿದ ರೋಹಿತ್ ಶರ್ಮ ಅವರಿಗೆ ಅಭಿನಂದನೆಗಳು’ ಎಂದು ಅವರು ಹೇಳಿದ್ದಾರೆ.