Advertisement

ಟಿ20 ವಿಶ್ವಕಪ್‌: 20 ತಂಡಗಳ ಸ್ಪರ್ಧೆಗೆ ಐಸಿಸಿ ಚಿಂತನೆ

12:47 AM May 15, 2021 | Team Udayavani |

ಹೊಸದಿಲ್ಲಿ: ಟಿ20 ವಿಶ್ವಕಪ್‌ ಕ್ರಿಕೆಟ್‌ನಲ್ಲಿ ಪಾಲ್ಗೊಳ್ಳುವ ತಂಡಗಳ ಸಂಖ್ಯೆಯನ್ನು ಹೆಚ್ಚಿಸಲು ಐಸಿಸಿ ಚಿಂತನೆ ನಡೆಸುತ್ತಿದ್ದು, 20 ತಂಡಗಳಿಗೆ ಅವಕಾಶ ನೀಡಲು ಯೋಜನೆ ರೂಪಿಸುತ್ತಿದೆ ಎಂದು ವರದಿಯೊಂದು ತಿಳಿಸಿದೆ. ವಿಶ್ವದಾದ್ಯಂತ ಕ್ರಿಕೆಟನ್ನು ಜನಪ್ರಿಯಗೊಳಿಸುವುದೇ ಇದರ ಉದ್ದೇಶವಾಗಿದೆ.

Advertisement

ಇತ್ತೀಚಿನ ದಿನಗಳಲ್ಲಿ ಚುಟುಕು ಮಾದರಿಯ ಕ್ರಿಕೆಟ್‌ ಜಗತ್ತಿನಾದ್ಯಂತ ಪ್ರೇಕ್ಷಕರನ್ನು ಸೆಳೆಯುತ್ತಿದೆ. ಹೀಗಾಗಿ ವಿಶ್ವಕಪ್‌ನಂತಹ ವೇದಿಕೆಯಲ್ಲಿ ಹೆಚ್ಚಿನ ತಂಡಗಳಿಗೆ ಅವಕಾಶವನ್ನು ನೀಡಿದರೆ ಕ್ರೀಡೆಯ ಬೆಳವಣಿಗೆಗೆ ಮತ್ತಷ್ಟು ಸಹಕಾರಿ ಎಂಬುದು ಐಸಿಸಿಯ ಲೆಕ್ಕಾಚಾರವಾಗಿದೆ.

ಪ್ರಸ್ತುತ ಟಿ20 ವಿಶ್ವಕಪ್‌ನಲ್ಲಿ 16 ತಂಡಗಳು ಪಾಲ್ಗೊಳ್ಳುತ್ತಿವೆ. ಸದ್ಯ 2021ರ ವಿಶ್ವಕಪ್‌ ಪಂದ್ಯಾವಳಿಯಲ್ಲಿ ಯಾವುದೇ ಬದಲಾವಣೆ ಇರದು. ಆದರೆ 2024ರ ಟಿ20 ವಿಶ್ವಕಪ್‌ನಲ್ಲಿ ಹೆಚ್ಚುವರಿ ತಂಡಗಳನ್ನು ಆಡಿಸುವ ಸಾಧ್ಯತೆ ಇದೆ. ಆಗ ಐದು ತಂಡಗಳ ನಾಲ್ಕು ಗುಂಪುಗಳಾಗಿ ವಿಂಗಡಿಸಿ ಕೂಟವನ್ನು ಆಯೋಜಿಸುವ ಸಾಧ್ಯತೆಯಿದೆ.

ಮಹಿಳಾ ವಿಭಾಗದ ಟೂರ್ನಿಯಲ್ಲಿ ಈ ಬದಲಾವಣೆಯನ್ನು ಮಾಡಿಕೊಳ್ಳುತ್ತಿರುವುದಾಗಿ ಐಸಿಸಿ ಈಗಾಗಲೇ ಖಚಿತಪಡಿಸಿದೆ. ಈ ಬದಲಾವಣೆಯನ್ನು ಮುಂದಿನ ದಿನಗಳಲ್ಲಿ ಐಸಿಸಿ ಏಕದಿನ ವಿಶ್ವಕಪ್‌ ಪಂದ್ಯಾವಳಿಯಲ್ಲೂ ಅಳವಡಿಸಿಕೊಳ್ಳುವ ಸಾಧ್ಯತೆಯಿದೆ.

Advertisement

Udayavani is now on Telegram. Click here to join our channel and stay updated with the latest news.

Next