Advertisement

ಉಪ ಚುನಾವಣೆಯಲ್ಲಿ ಮ್ಯಾಚ್‌ ಫಿಕ್ಸಿಂಗ್‌ ರೀತಿ ವೋಟ್‌ ಫಿಕ್ಸಿಂಗ್‌ : ಶರವಣ ಆರೋಪ

07:25 PM Oct 26, 2020 | sudhir |

ಬೆಂಗಳೂರು: ಉಪಚುನಾವಣೆ ಗೆಲ್ಲಲು ಒಂದು ಕಡೆ ಜಾತಿ, ಇನ್ನೊಂದು ಕಡೆ ಅಧಿಕಾರ ಬಳಸಲಾಗುತ್ತಿದ್ದು , ಬಿಜೆಪಿಯವರು ಮತದಾರರಿಗೆ ಸೆಟ್‌ಟಾಪ್‌ ಬಾಕ್ಸ್‌ ನೀಡುತ್ತಿದ್ದಾರೆ ಎಂದು ಪರಿಷತ್‌ ಮಾಜಿ ಸದಸ್ಯ ಟಿ.ಎ.ಶರವಣ ದೂರಿದ್ದಾರೆ.

Advertisement

ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜರಾಜೇಶ್ವರಿ ನಗರದಲ್ಲಿ ಕಾಂಗ್ರೆಸ್‌ ನಾಯಕರು ಜಾತಿ ಆಧಾರದ ಮೇಲೆ ಮತ ಕೇಳುತ್ತಿದ್ದಾರೆ. ಬಿಜೆಪಿಯವರು ಅಧಿಕಾರ ದುರುಪಯೋಗ ಮಾಡಿಕೊಂಡು ಮತದಾರರಿಗೆ ಆಮಿಷವೊಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮ್ಯಾಚ್‌ ಫಿಕ್ಸಿಂಗ್‌ ರೀತಿ ವೋಟ್‌ ಫಿಕ್ಸಿಂಗ್‌ ಮಾಡಿರುವಂತೆ ಕಾಣುತ್ತಿದೆ. ಎರಡು ರಾಷ್ಟ್ರೀಯ ಪಕ್ಷಗಳು ಚುನಾವಣಾ ಅಕ್ರಮ ಎಸಗುತ್ತಿದ್ದರೂ ಚುನಾವಣಾ ಆಯೋಗ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ದೂರಿದರು.

ಬಿಜೆಪಿ ಅಭ್ಯರ್ಥಿ ಶಾಸಕ ಸ್ಥಾನ ಮಾರಾಟ ಮಾಡಿಕೊಂಡಿದ್ದಕ್ಕೆ ಉಪಚುನಾವಣೆ ಬಂದಿದೆ. ಆದರೆ, ಫೇಸ್‌ಬುಕ್‌ಗಳಲ್ಲಿ ನಮ್ಮ ಅಭ್ಯರ್ಥಿ ಮಾರಾಟವಾಗಿದ್ದಾರೆ ಎಂದು ಸುಳ್ಳುಸುದ್ದಿಯನ್ನು ಉದ್ದೇಶಪೂರ್ವಕವಾಗಿ ಹಬ್ಬಿಸಲಾಗುತ್ತಿದೆ. ಈ ಮೂಲಕ ನಮ್ಮ ಕಾರ್ಯಕರ್ತರ ಆತ್ಮಸ್ಥೈರ್ಯವನ್ನು ಕುಗ್ಗಿಸುವ ಕೆಲಸ ಮಾಡಲಾಗುತ್ತಿದೆ . ಇದರ ವಿರುದ್ಧ ದೂರು ನೀಡಲಿದ್ದೇವೆ ಎಂದು ಹೇಳಿದರು.

ನಾವಲ್ಲ
ಜೆಡಿಎಸ್‌ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಮಾತನಾಡಿ, ಮಾರಾಟ ಆಗಿರುವುದು ನಾವಲ್ಲ, ಬಿಜೆಪಿ ಮತ್ತು ಕಾಂಗ್ರೆಸ್‌ನವರು ಮಾರಾಟವಾಗಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸಿ ತೇಜೋವಧೆ ಮಾಡುತ್ತಿದ್ದಾರೆ. ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ನಮ್ಮ ನಾಯಕರು ಟಿಕೆಟ್‌ ಕೊಟ್ಟಿದ್ದೇ ತಪ್ಪಾ, ಯುವಕರು ಬೆಳೆಯಬಾರದಾ ಎಂದು ಪ್ರಶ್ನಿಸಿದರು.

Advertisement

ಜೆಡಿಎಸ್‌ ನಗರ ಘಟಕದ ಅಧ್ಯಕ್ಷ ಆರ್‌.ಪ್ರಕಾಶ್‌ ಮಾತನಾಡಿ, ಕಾಂಗ್ರೆಸ್‌ ಅಭ್ಯರ್ಥಿಯ ತಂದೆ ಹನುಮಂತರಾಯಪ್ಪ ಅವರಿಗೆ ದುರಾಸೆ, ಅಧಿಕಾರ ದಾಹ ಇದೆ. ತಮ್ಮ ಮಗಳಿಗೆ ಅನ್ಯಾಯ ಆಗಿದೆ. ಆದ್ದರಿಂದ, ಒಕ್ಕಲಿಗರೆಲ್ಲಾ ಒಂದಾಗಿ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು ಕೇಳುತ್ತಿದ್ದಾರೆ. ಒಕ್ಕಲಿಗ ಸಮಾಜಕ್ಕೆ ಯಾವತ್ತಿದ್ದರೂ ದೇವೇಗೌಡರು, ಕುಮಾರಸ್ವಾಮಿ ಅವರೇ ನಾಯಕರು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next