Advertisement

ಕಾಪು, ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ

08:40 AM Jun 24, 2021 | Team Udayavani |

ಕಾಪು: ಕಾಪು ಮತ್ತು ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ 179 ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆಯನ್ನು ಶಾಸಕ ಲಾಲಾಜಿ ಆರ್. ಮೆಂಡನ್ ಅವರು ಬುಧವಾರ ಕಾಪು ಪ್ರಥಮ ದರ್ಜೆ ಕಾಲೇಜಿನಲ್ಲಿ ನೆರವೇರಿಸಿದರು.

Advertisement

ಕಾಲೇಜಿನಲ್ಲಿ ಐ. ಸಿ. ಟಿ ಯುಕ್ತ ಸ್ಮಾರ್ಟ್ ತರಗತಿ ಕೊಠಡಿಗಳನ್ನು ಉದ್ಘಾಟಿಸಿದ ಅವರು, ಡಿಜಿಟಲ್ ಕಲಿಕೆಯ ಅಂಗವಾಗಿ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿಗಳ ಆಶಯದಂತೆ ಕೊಡಮಾಡುವ ಉಚಿತ ಟ್ಯಾಬ್ಲೆಟ್ ಪಿಸಿ ಗಳನಗನಹ ಸಾಂಕೇತಿಕವಾಗಿ ವಿತರಿಸಿದರು.

ಇದನ್ನೂ ಓದಿ:ಎಂಬಿಇಡಿ ಜಾರಿಗೆ ಕೇಂದ್ರ ಚಿಂತನೆ : ವಿದ್ಯುತ್‌ ಬಿಲ್‌ಗೆ ಬೀಳಲಿದೆ ಕತ್ತರಿ !

ಈ ಸಂದರ್ಭ ಮಾತನಾಡಿದ ಅವರು, ಕಾಪು ಕ್ಷೇತ್ರದ ಹಿರಿಯಡ್ಕ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ 101 ವಿದ್ಯಾರ್ಥಿಗಳು ಹಾಗೂ ಕಾಪು ಪ್ರಥಮ ದರ್ಜೆ ಕಾಲೇಜಿನ 78 ವಿದ್ಯಾರ್ಥಿಗಳು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಲಿದ್ದಾರೆ ಎಂದರು.‌

ಹಿರಿಯಡ್ಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ. ನಿಕೇತನಾ, ಕಾಪು ಸರಕಾರ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಅನಿಲ್ ಕುಮಾರ್, ಉಪನ್ಯಾಸಕರು, ವಿದ್ಯಾರ್ಥಿಗಳು, ಉಪಸ್ಥಿತರಿದ್ದರು

Advertisement
Advertisement

Udayavani is now on Telegram. Click here to join our channel and stay updated with the latest news.

Next