Advertisement

ಪೌರ ಕಾರ್ಮಿಕರ ಮಕ್ಕಳಿಗೆ ಟ್ಯಾಬ್‌

05:06 PM May 13, 2022 | Team Udayavani |

ಬೀದರ: ಪೌರ ಕಾರ್ಮಿಕರ ಮಕ್ಕಳಿಗೆ ಟ್ಯಾಬ್‌ಗಳನ್ನು ವಿತರಿಸುವುದರ ಮೂಲಕ ಅವರ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಲಾಗುವುದು ಎಂದು ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಚ್‌. ಹನುಮಂತಪ್ಪ ಹೇಳಿದರು.

Advertisement

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಗಮದ ಹಿಂದಿನ ಯೋಜನೆಗಳನ್ನು ಮುಂದುವರೆಸುವುದರ ಜೊತೆಗೆ ಹೊಸ ಯೋಜನೆ ಜಾರಿಗೆ ತರಲಾಗುವುದು. ಸಫಾಯಿ ಕರ್ಮಚಾರಿಗಳು ಸಮಾಜದ ಕಟ್ಟ ಕಡೆಯ ಸಮುದಾಯವಾಗಿದ್ದು ಅವರು ಒಂದು ದಿನ ಕೆಲಸ ಮಾಡದೆ ಇದ್ದರೆ ನಾವು ವಾಸಿಸಲು ಆಗುವುದಿಲ್ಲ. ಹಾಗಾಗಿ ಅವರಿಗೆ ವಿಶೇಷ ಕಾಳಜಿ ವಹಿಸಲಾಗುವುದು. ಪೌರ ಕಾರ್ಮಿಕರ ಸ್ಥಿತಿಗತಿಗಳನ್ನು ಅಧ್ಯಯನ ಮಾಡಿ ಆ ಸಮುದಾಯವನ್ನು ಮುಖ್ಯ ವಾಹಿನಿಗೆ ತರುವ ಕೆಲಸ ಮಾಡುತ್ತಿದ್ದೇನೆ ಎಂದರು.

ರಾಜ್ಯದಲ್ಲಿ 1.43 ಲಕ್ಷ ಸಫಾಯಿ ಕರ್ಮಚಾರಿಗಳಿದ್ದಾರೆ. 2013 ಸಮೀಕ್ಷೆ ಪ್ರಕಾರ 5080 ಮ್ಯಾನ್ಯುಯಲ್‌ ಸ್ಕ್ಯಾವೆಂಜರ್‌ ಗಳಿದ್ದು, ಸದ್ಯ ಸರ್ವೇ ಮಾಡಿದರೆ ಈ ಸಂಖ್ಯೆ 10 ಸಾವಿರಕ್ಕೆ ಹೆಚ್ಚಾಗಬಹುದು ಎಂದು ಹೇಳಿದ ಅವರು, ಬೇರೆ ಬೇರೆ ಕ್ಷೇತ್ರಗಳಾದ ಸರ್ಕಾರಿ ಆಸ್ಪತ್ರೆ. ಬಸ್‌ ನಿಲ್ದಾಣ ಸೇರಿದಂತೆ ಇತರ ಕಡೆ ಕೆಲಸ ಮಾಡುವವರನ್ನು ಗುರುತಿಸಿ ಅವರಿಗೆ ಸಫಾಯಿ ಕರ್ಮಚಾರಿಗಳನ್ನಾಗಿ ಮಾಡುವ ಕೆಲಸ ಮಾಡಲಾಗುವುದು ಎಂದರು.

ರಾಜ್ಯದ ಮಹಾನಗರ ಪಾಲಿಕೆ ಬೆಂಗಳೂರು, ಮೈಸೂರು, ಬೆಳಗಾವಿ, ಕಲಬುರಗಿ ಸೇರಿದಂತೆ ಈ 10 ಮಹಾನಗರಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ 1 ಲಕ್ಷ್ಯ ಮೌಲ್ಯದ 400 ವಿದ್ಯುತ್‌ ಬೈಕ್‌ಗಳನ್ನು ವಿತರಿಸಲಾಗಿದೆ. ಅದಕ್ಕಿಂತ ಹೆಚ್ಚಿನ ಅರ್ಜಿಗಳು ಬಂದಿವೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಮಾಜದ ಈ ಕಟ್ಟ ಕಡೆಯ ಸಮುದಾಯಕ್ಕೆ ಒತ್ತು ನೀಡಬೇಕೆಂದು ಹೇಳಿದರು. ಸಮಾಜ ಕಲ್ಯಾಣ ಇಲಾಖೆಯ ರಾಜ್ಯ ಸಲಹಾ ಮಂಡಳಿ ಸದಸ್ಯ ವಿಜಯಕುಮಾರ ಅಡಕಿ, ಅಪರ ಜಿಲ್ಲಾ ಧಿಕಾರಿ ಶಿವಕುಮಾರ ಇದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next