Advertisement

San Francisco; ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ಅವರಿಗೆ ​​​​ಐಸಿಯುನಲ್ಲಿ ಚಿಕಿತ್ಸೆ

10:19 PM Dec 15, 2024 | Team Udayavani |

ನವದೆಹಲಿ: ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ಅವರನ್ನು ಹೃದಯ ಸಂಬಂಧಿ ಸಮಸ್ಯೆಗಳ ಕಾರಣದಿಂದ ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದೆ ಎಂದು ಅವರ ಸ್ನೇಹಿತ ಮತ್ತು ಕೊಳಲು ವಾದಕ ರಾಕೇಶ್ ಚೌರಾಸಿಯಾ ರವಿವಾರ(ಡಿ15) ಹೇಳಿದ್ದಾರೆ.

Advertisement

”ತಬಲಾವನ್ನು ಜಾಗತಿಕ ಹಂತಕ್ಕೆ ಕೊಂಡೊಯ್ದ 73 ವರ್ಷದ ಜಾಕೀರ್ ಹುಸೇನ್ ಅವರು ಕಳೆದ ಎರಡು ವಾರಗಳಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು, ರಕ್ತದೊತ್ತಡ ಸಮಸ್ಯೆ ಇತ್ತು” ಎಂದು ಹುಸೇನ್ ಅವರ ಮ್ಯಾನೇಜರ್ ನಿರ್ಮಲಾ ಬಚಾನಿ ಹೇಳಿದ್ದಾರೆ.

“ಜಾಕೀರ್ ಹುಸೇನ್ ಅವರು ಅಸ್ವಸ್ಥರಾಗಿದ್ದಾರೆ ಮತ್ತು ಇದೀಗ ಐಸಿಯುನಲ್ಲಿ ದಾಖಲಾಗಿದ್ದಾರೆ. ನಾವೆಲ್ಲರೂ ಪರಿಸ್ಥಿತಿಯ ಬಗ್ಗೆ ಚಿಂತಿತರಾಗಿದ್ದೇವೆ” ಎಂದು ಚೌರಾಸಿಯಾ ಪಿಟಿಐಗೆ ತಿಳಿಸಿದ್ದಾರೆ.

ಆರು ದಶಕಗಳ ಕಾಲದ ಅವರ ವೃತ್ತಿಜೀವನದಲ್ಲಿ ಜಾಕೀರ್ ಹುಸೇನ್ ಅವರ ಹಲವಾರು ಹೆಸರಾಂತ ಅಂತಾರಾಷ್ಟ್ರೀಯ ಮತ್ತು ಭಾರತೀಯ ಕಲಾವಿದರೊಂದಿಗೆ ಸಾಥ್ ನೀಡಿದ್ದಾರೆ.

1988 ರಲ್ಲಿ ಪದ್ಮಶ್ರೀ, 2002 ರಲ್ಲಿ ಪದ್ಮಭೂಷಣ ಮತ್ತು 2023 ರಲ್ಲಿ ಪದ್ಮವಿಭೂಷಣ ಪ್ರಶಸ್ತಿಗೆ ಜಾಕೀರ್ ಹುಸೇನ್ ಭಾಜನರಾಗಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next