Advertisement

ಟಗರು ಚಿತ್ರೀಕರಣ ಮುಕ್ತಾಯ

11:35 AM Dec 05, 2017 | |

ಶಿವರಾಜಕುಮಾರ್‌ ನಾಯಕರಾಗಿ ಅಭಿನಯಿಸಿರುವ, ಸೂರಿ ನಿರ್ದೇಶನದ “ಟಗರು’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಇತ್ತೀಚೆಗೆ ಗವಿಪುರಂನ ಬಂಡಿ ಮಹಾಕಾಳಿ ದೇವಸ್ಥಾನದಲ್ಲಿ ಕುಂಬಳಕಾಯಿ ಒಡೆಯುವುದರ ಮೂಲಕ ಚಿತ್ರದ ಚಿತ್ರೀಕರಣ ಪೂರ್ಣವಾಯಿತು. 

Advertisement

ಸೂರಿ ಅವರೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರವನ್ನು ವೀನಸ್‌ ಎಂಟರ್‌ ಟೈನರ್‌ ಮೂಲಕ ಕೆ.ಪಿ.ಶ್ರೀಕಾಂತ್‌ ನಿರ್ಮಾಣ ಮಾಡುತ್ತಿದ್ದಾರೆ.  ಚರಣ್‌ರಾಜ್‌ ಸಂಗೀತ ನಿರ್ದೇಶನದ ಈ ಚಿತ್ರಕ್ಕೆ  ಮಹೇಂದ್ರ ಸಿಂಹ ಅವರ ಛಾಯಾಗ್ರಹಣವಿದೆ.

ದೀಪು ಎಸ್‌ ಕುಮಾರ್‌ ಸಂಕಲನ, ಸುರೇಶ್‌ ಕಲಾ ನಿರ್ದೇಶನ, ಸೂರಿ ನೃತ್ಯ ನಿರ್ದೇಶನ ಹಾಗೂ ಸೂರಿ, ಜಾಲಿ ಬಾಸ್ಟಿನ್‌, ವಿನೋದ್‌ ಅವರ ಸಾಹಸ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಯೋಗರಾಜ್‌ ಭಟ್‌, ಜಯಂತ ಕಾಯ್ಕಿಣಿ ಹಾಗೂ ನಾಗೇಂದ್ರ ಪ್ರಸಾದ್‌ ಬರೆದಿದ್ದಾರೆ. ಶಿವರಾಜಕುಮಾರ್‌, ಮಾನ್ವಿತಾ ಹರೀಶ್‌, ಭಾವನಾರಾವ್‌, ಧನಂಜಯ್‌, ದೇವರಾಜ್‌, ವಸಿಷ್ಠ ಸಿಂಹ, ಅಚ್ಯುತ ಕುಮಾರ್‌ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next