Advertisement
ಠಾಗೋರ್ ಪಾರ್ಕ್ ನಗರದ ಹಳೆಯ ಪಾರ್ಕ್ ಗಳಲ್ಲಿ ಒಂದಾಗಿದ್ದು, ಇತ್ತೀಚಿನ ದಿನಗಳಲ್ಲಿ ಸರಿಯಾಗಿ ನಿರ್ವಹಣೆ ಮಾಡದೆ, ಕಸ- ಕಡ್ಡಿ, ತ್ಯಾಜ್ಯಗಳನ್ನು ತೆರವುಗೊಳಿಸದೆ ಕಳಾಹೀನವಾಗಿತ್ತು. ಪಾರ್ಕ್ ನಲ್ಲಿ ನೂತನವಾಗಿ ಪ್ರತಿಷ್ಠಾಪಿಸಲಾಗಿರುವ ಸ್ವಾತಂತ್ರ್ಯ ಸಮರ ವೀರ ಕೆದಂಬಾಡಿ ರಾಮಯ್ಯಗೌಡ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮ ನ. 19ರಂದು ನಡೆಯಲಿದ್ದು, ಇದರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ, ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಡಾ| ನಿರ್ಮಲಾನಂದನಾಥ ಸ್ವಾಮೀಜಿ ಸಹಿತ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪಾರ್ಕ್ ಅನ್ನು ಸಜ್ಜುಗೊಳಿಸುವ ಕೆಲ ಸ ಕೆಲವು ದಿನಗಳಿಂದ ಭರದಿಂದ ಸಾಗಿದೆ.
Related Articles
Advertisement
ನಿರ್ವಹಣೆಯೂ ಆಗಬೇಕು
ಕಾರ್ಯಕ್ರಮದ ಉದ್ದೇಶದಿಂದ ಒಂದು ಬಾರಿ ಸ್ವಚ್ಛಗೊಳಿಸಿ, ಸುಣ್ಣ ಬಣ್ಣ ಬಳಿದು ಸಿಂಗರಿಸುವುದು. ಬಳಿಕ ಹಿಂದಿನಂತೆ ನಿರ್ವಹಣೆ ಮಾಡದಿರುವುದು ಸರಿಯಲ್ಲ. ಮುಂದಿನ ದಿನಗಳಲ್ಲಿಯೂ ಪಾರ್ಕ್‌ನ ನಿರ್ವಹಣೆ ನಿರಂತರವಾಗಿ ನಡೆಯಬೇಕು. ಆ ಮೂಲಕ ಪಾರ್ಕ್‌ನಲ್ಲಿ ಪ್ರತಿಷ್ಠಾಪಿಸಲಾಗಿರುವ ರಾಮಯ್ಯಗೌಡರ ಪ್ರತಿಮೆಗೆ ಗೌರವ ಸಲ್ಲಿಸುವ ಕೆಲಸವಾಗಬೇಕು ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುವ ತಾಣವಾಗುವುದರಿಂದ ನಿರ್ವಹಣೆ ಅಗತ್ಯವಾಗಿ ನಡೆಯಬೇಕಿದೆ.
ಅಭಿವೃದ್ಧಿ ಕಾಮಗಾರಿಗೆ ಚಾಲನೆ: ಠಾಗೋರ್ ಪಾರ್ಕ್ ನಲ್ಲಿ ಕೆದಂಬಾಡಿ ರಾಮಯ್ಯಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮ ನಡೆಯಲಿರುವುದರಿಂದ ಪಾರ್ಕ್‌ನ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಪಾರ್ಕ್ ಮತ್ತೆ ಹೊಸ ರೂಪದೊಂದಿಗೆ ಕಂಗೊಳಿಸಲಿದೆ. –ಜಯಾನಂದ ಅಂಚನ್, ಮೇಯರ್