Advertisement

ತಹಶೀಲ್ದಾರ್‌ ಗ್ರಾಮ ವಾಸ್ತವ್ಯ : “ಸಾರ್ವಜನಿಕರ ತಳಮಟ್ಟದ ಸಮಸ್ಯೆಗಳಿಗೆ ಪರಿಹಾರ’

10:35 PM Feb 20, 2021 | Team Udayavani |

ಬಜಪೆ: ಮುಚ್ಚಾರು ಗ್ರಾ.ಪಂ. ವ್ಯಾಪ್ತಿಯ ಕೊಂಪದವು ಹಾಗೂ ಮುಚ್ಚಾರು ಗ್ರಾಮದಲ್ಲಿ ಕಂದಾಯ ಇಲಾಖೆಗೆ ಸಂಬಂಧ ಪಟ್ಟ ಸಮಸ್ಯೆಗಳ ಹಾಗೂ ಅರ್ಜಿ ವಿಲೇವಾರಿ ಮಾಡಲು ತಹಶೀಲ್ದಾರರ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಶನಿವಾರ ಮುಚ್ಚಾರು ಗ್ರಾ.ಪಂ. ಕಚೇರಿಯಲ್ಲಿ ಜರಗಿತು.

Advertisement

ಕಾರ್ಯಕ್ರಮವನ್ನು ಜಿ.ಪಂ. ಸದಸ್ಯ ಜನಾರ್ದನ ಗೌಡ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಮಾತನಾಡಿ, ಜನರ ಬಳಿಗೆ ಅಧಿಕಾರಿಗಳು ಬರುವುದರಿಂದ ತಳಮಟ್ಟದಲ್ಲಿನ ಸಮಸ್ಯೆಗಳಿಗೆ ಪರಿಹಾರ ಕಂಡಕೊಳ್ಳಬಹುದಾಗಿದೆ. ಅಲ್ಲದೆ ಜನರಿಗೆ ಸರಕಾರದ ಯೋಜನೆ, ಕಾರ್ಯಕ್ರಮಗಳ ಮಾಹಿತಿ ತಿಳಿಯಲು ಪೂರಕವಾಗುತ್ತದೆ. ಇದನ್ನು ಜನರು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಮಂಗಳೂರು ತಾ| ಸಹಾಯಕ ಕಮಿಷನರ್‌ ಮದನ್‌ ಮೋಹನ್‌, ತಹಶೀಲ್ದಾರ್‌ ಗುರುಪ್ರಸಾದ್‌, ಗ್ರಾ.ಪಂ. ಅಧ್ಯಕ್ಷೆ ಮೋಹಿನಿ, ಉಪಾಧ್ಯಕ್ಷ ನಾರಾಯಣ ಪೂಜಾರಿ, ಪಿಡಿಒ ಜಲಜಾ, ಗ್ರಾ.ಪಂ. ಸದಸ್ಯರು ಉಪಸ್ಥಿತರಿದ್ದರು.

ಉಪತಹಶೀಲ್ದಾರ್‌ ಶಿವಪ್ರಸಾದ್‌ ಕಾರ್ಯಕ್ರಮ ನಿರೂಪಿಸಿದರು. ಗ್ರಾ.ಪಂ. ಕಾರ್ಯದರ್ಶಿ ಸತೀಶ್‌ ಕುಮಾರ್‌ ಪಿ.ವಿ. ವಂದಿಸಿದರು. ಕಂದಾಯ ನಿರೀಕ್ಷಕರು ನವನೀತ್‌ ಮಾಳವ, ಆಹಾರ ಇಲಾಖೆಯ ಅಧಿಕಾರಿಗಳು, ಸರ್ವೇ ಇಲಾಖೆಯ ಅಧಿಕಾರಿಗಳು, ಗ್ರಾಮ ಕರಣಿಕರು, ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಕೃಷಿ ಇಲಾಖೆಯ ಅಧಿಕಾರಿಗಳು, ನಾಡ ಕಚೇರಿಯ ಸಿಬಂದಿ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾ.ಪಂ. ಸಿಬಂದಿ ಸಹಕರಿಸಿದರು.

107 ಅರ್ಜಿ ಸ್ವೀಕಾರ
ಸುಮಾರು 150ಕ್ಕಿಂತಲೂ ಹೆಚ್ಚು ಗ್ರಾಮಸ್ಥರು ಭಾಗವಹಿಸಿದರು. ಹಕ್ಕುಪತ್ರ, ಸಂಧ್ಯಾ ಸುರಕ್ಷಾ ವೇತನ, ವಿಧವಾವೇತನ, ವೃದ್ಧಾಪ್ಯ ವೇತನ, ಮನಸ್ವಿನಿ, ಅಂಗವಿಕಲ ವೇತನಗಳು, ಮತದಾರರ ಪಟ್ಟಿ ಪರಿಶೀಲನೆ, ಸೇರ್ಪಡೆ, ಸ್ಥಳಕ್ಕೆ ಭೇಟಿ ನೀಡಿ ರಸ್ತೆ, ಪ.ಜಾತಿ, ಪಂಗಡದ ಪಿಂಚಣಿ, ಜಾಗದ ತಕರಾರುಗಳ ಬಗ್ಗೆ ಪರಿಹಾರ ಕಂಡುಕೊಳ್ಳಲಾಯಿತು. ಮಧ್ಯಾಹ್ನದ ವೇಳೆಗೆ ಸ್ವೀಕರಿಸಿದ ಅರ್ಜಿಗಳು ಪಿಂಚಣಿ 55, ಜಾತಿ ಆದಾಯ 46, ಸರ್ವೇ ಇಲಾಖೆ 6 ಒಟ್ಟು 107 ಅರ್ಜಿಗಳನ್ನು ಸ್ವೀಕರಿಸಲಾಯಿತು.

Advertisement
Advertisement

Udayavani is now on Telegram. Click here to join our channel and stay updated with the latest news.

Next